ಸತೀಶ್ ಕೆ. ಕಾಶಿಪಟ್ಣ ಅವರನ್ನು ‘ಸಹಕಾರಿ ರತ್ನ ಪ್ರಶಸ್ತಿ’ಗೆ ಆಯ್ಕೆಗೊಳಿಸಿದ ರಾಜ್ಯ ಸರಕಾರ
ಬೆಳ್ತಂಗಡಿ: ಸಹಕಾರಿ ಕ್ಷೇತ್ರದಲ್ಲಿ ಕಳೆದ 25 ವರ್ಷಗಳಿಂದ ಸಲ್ಲಿಸಿರುವ ಸೇವೆಗಾಗಿ ಬೆಳ್ತಂಗಡಿ ತಾಲೂಕಿನ ಹಿರಿಯ ಸಹಕಾರಿ ಮುಖಂಡ ಸತೀಶ್ ಕಾಶಿಪಟ್ಣ ಅವರನ್ನು ರಾಜ್ಯ ಸರಕಾರ ಸಹಕಾರಿ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಿದೆ.
ಪೆರಾಡಿ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾಗಿರುವ ಸತೀಶ್ ಕೆ. ಅವರು ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರಾಗಿ, ಬೆಳ್ತಂಗಡಿ ಕೃಷಿ ಉತ್ಪನ್ನಗಳ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘದ ಅಧ್ಯಕ್ಷರೂ ಆಗಿದ್ದರು.
ನ. 14ರಂದು ಬೆಂಗಳೂರಿನಲ್ಲಿ ನಡೆಯುವ ಸಹಕಾರಿ ಸಪ್ತಾಹ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

