ಅಂಗನವಾಡಿ ಕಾರ್ಯಕರ್ತ ಮತ್ತು ಸಹಾಯಕರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

 

 

 

 

ಚಿತ್ರದುರ್ಗ,ಫೆಬ್ರವರಿ05:
ಮೊಳಕಾಲ್ಮೂರು ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ವಿವಿಧ  ಕಾರಣಗಳಿಂದ ತಡೆಹಿಡಿದಿರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಭರ್ತಿ ಮಾಡಲು 2021ರ ಸೆ.16ರಂದು ಪ್ರಕಟಣೆ ಹೊರಡಿಸಿ ಅ.16ರಂದು ಕೊನೆಯ ದಿನವಾಗಿ ನಿಗಧಿ ಪಡಿಸಿ ಅರ್ಹ ಅಭ್ಯರ್ಥಿಗಳಿಂದ  ಅರ್ಜಿ ಆಹ್ವಾನಿಸಲಾಗಿತ್ತು. ಇದೇ ಫೆಬ್ರವರಿ 05ರಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಂಗನವಾಡಿ ಕಾರ್ಯಕರ್ತರ, ಸಹಾಯಕಿಯರ ಆಯ್ಕೆ ಸಮಿತಿ ಸಭೆ ಸೇರಿ ಅರ್ಜಿಗಳನ್ನು ಪರಿಶೀಲಿಸಿ ಬಾಂಡ್ರಾವಿ-ಎ ಕೇಂದ್ರದ ಅಂಗನವಾಡಿ ಕಾರ್ಯಕರ್ತೆ ಹುದ್ದೆಯನ್ನು ತಾತ್ಕಾಲಿಕವಾಗಿ ಆಯ್ಕೆ ಮಾಡಲಾಗಿದೆ.
ತಾತ್ಕಾಲಿಕ ಆಯ್ಕೆ  ಪಟ್ಟಿಯನ್ನು ಮೊಳಕಾಲ್ಮೂರು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯ ಸೂಚನಾ ಫಲಕದಲ್ಲಿ  ಪ್ರಕಟಿಸಲಾಗಿರುತ್ತದೆ.
ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ಫೆಬ್ರವರಿ 11 ರ ಸಂಜೆ 5.30ರೊಳಗಾಗಿ ಸೂಕ್ತ ದಾಖಲಾತಿಗಳೊಂದಿಗೆ ಆಕ್ಷೇಪಣೆಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಮೊಳಕಾಲ್ಮೂರು ಇಲ್ಲಿಗೆ ಸಲ್ಲಿಸಬಹುದು.
ನಿಗಧಿ ಪಡಿಸಿದ ದಿನಾಂಕದ ನಂತರ ಬಂದ ಆಕ್ಷೇಪಣೆಗಳನ್ನು ಮತ್ತು ಸೂಕ್ತ ದಾಖಲಾತಿಗಳಿಲ್ಲದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಮೊಳಕಾಲ್ಮೂರು ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಳಿಸಿದ್ದಾರೆ.

 

 

[t4b-ticker]

You May Also Like

More From Author

+ There are no comments

Add yours