ಆದ್ಯತೆ ಮೇರೆಗೆ ಕ್ರೀಡಾಪಟುಗಳಿಗೆ ಕೋವಿಡ್ ಲಸಿಕೆ

 

ಚಿತ್ರದುರ್ಗ,ಜೂನ್11:
ರಾಜ್ಯ ಸರ್ಕಾರವು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಅಂತರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯಮಟ್ಟದ ಕ್ರೀಡೆಗಳಲ್ಲಿ ಪ್ರತಿನಿಧಿಸಿದ 18 ರಿಂದ 44 ವರ್ಷ ವಯೋಮಿತಿ ಕ್ರೀಡಾಪಟುಗಳಿಗೆ ಕೋವಿಡ್-19 ವೈರಸ್ ಸೋಂಕಿನಿಂದ ರಕ್ಷಿಸುವ ಸಲುವಾಗಿ ಆದ್ಯತೆ ಮೇರೆಗೆ ಕೋವಿಡ್ ಲಸಿಕೆ ಕೊಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ.
ಚಿತ್ರದುರ್ಗ ಜಿಲ್ಲೆಯಿಂದ ರಾಜ್ಯ, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿದ, ವಿಜೇತರಾದ 18 ರಿಂದ 44 ವರ್ಷ ವಯೋಮಿತಿಯ ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿಗಳಿಂದ ಅನುಮೋದನೆ ಪಡೆದು ಎರಡನೇ ಹಂತದಲ್ಲಿ ಆದ್ಯತೆಯ ಮೇರೆಗೆ ಲಸಿಕೆ ಹಾಕಿಸಲು ಕ್ರಮವಹಿಸಲಾಗುವುದು.
ಜಿಲ್ಲೆಯ ಕ್ರೀಡಾಪಟುಗಳು ತಮ್ಮ ಸಾಧನೆಯ ಪ್ರಶಸ್ತಿ ಪತ್ರ ಹಾಗೂ ಆಧಾರ್ ಕಾರ್ಡ್‍ನ  ಜೆರಾಕ್ಸ್ ಪ್ರತಿಯನ್ನು ನಗರದ ವೀರವನಿತೆ ಒನಕೆ ಓಬವ್ವ ಕ್ರೀಡಾಂಗಣದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಜೂನ್ 16ರೊಳಗಾಗಿ ಸಲ್ಲಿಸಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ  ಇಲಾಖೆ ಸಹಾಯಕ ನಿರ್ದೇಶಕರು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
========

[t4b-ticker]

You May Also Like

More From Author

+ There are no comments

Add yours