ಬೆಂಗಳೂರು: ಕೊರೊನಾದಿಂದ ಮೃತಪಟ್ಟವರ ಕುಟುಂಬಕ್ಕೆ ಸರ್ಕಾರದಿಂದ 50 ಸಾವಿರ ರೂಪಾಯಿ ಪರಿಹಾರವನ್ನು ನೀಡಲಾಗುತ್ತದೆ.
ಕೋವಿಡ್ ನಿಂದ ಮೃತಪಟ್ಟವರ ಕುಟುಂಬದ ಕಾನೂನುಬದ್ಧ ವಾರಸುದಾರರಿಗೆ SDRF ಮಾರ್ಗಸೂಚಿಗಳ ಪ್ರಕಾರ, 50 ಸಾವಿರ ರೂಪಾಯಿ ಪರಿಹಾರ ವಿತರಿಸುವ ಸಂಬಂಧ ಕ್ರಮಕೈಗೊಳ್ಳಲಾಗಿದೆ.
ಮೃತಪಟ್ಟವರ ವಿವರ ಆರೋಗ್ಯ ಇಲಾಖೆಯ ದತ್ತಾಂಶದಲ್ಲಿ ಇಲ್ಲದಿದ್ದರೂ, ಅಂತಹ ಪ್ರಕರಣಗಳಿಗೆ ಪರಿಹಾರ ನೀಡುವ ಪ್ರಕ್ರಿಯೆ ಕುರಿತಂತೆ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಪರಿಶೀಲನೆ ನಡೆಸಿ ಅರ್ಹ ವಾರಸುದಾರರಿಗೆ ನೇರ ನಗದು ವರ್ಗಾವಣೆ ಮೂಲಕ 50 ಸಾವಿರ ರೂ. ಪಾವತಿಸಲು ಸಾಮಾಜಿಕ ಭದ್ರತೆ ಮತ್ತು ಪಿಂಚಣಿಗಳ ನಿರ್ದೇಶನಾಲಯದ ನಿರ್ದೇಶಕರಿಗೆ ಅನುಮತಿ ನೀಡಲಾಗಿದೆ ಎಂದು ಹೇಳಲಾಗಿದೆ.
[t4b-ticker]
+ There are no comments
Add yours