ಕಾನೂನು ಪದವೀಧರರಿಂದ ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ

 

 

 

 

ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ
ಚಿತ್ರದುರ್ಗ(ಕರ್ನಾಟಕ ವಾರ್ತೆ) ಮೇ17:
2022-23ನೇ ಸಾಲಿಗೆ ಆಡಳಿತ ನ್ಯಾಯಾಧೀಕರಣದಲ್ಲಿ ತರಬೇತಿ ನೀಡಲು ಪರಿಶಿಷ್ಟ ಜಾತಿಯ ಕಾನೂನು ಪದವೀಧರರನ್ನು ಆಯ್ಕೆಮಾಡಲು ಪರಿಶಿಷ್ಟ ಜಾತಿಯ ಅರ್ಹ ಕಾನೂನು ಪದವೀಧರರಿಂದ ಮೇ 25 ರಿಂದ ಜೂನ್ 24ರವರೆಗೆ ಅರ್ಜಿಯನ್ನು ಆಹ್ವಾಸಲಾಗುವುದು.
ಕಾನೂನು ಪದವೀಧರರು ಅರ್ಜಿಯನ್ನು ಇಲಾಖಾ ವೆಬ್‍ಸೈಟ್: ತಿತಿತಿ.sತಿ.ಞಚಿಡಿ.ಟಿiಛಿ.iಟಿನಲ್ಲಿ ಮೇ25ರ ನಂತರ ಅರ್ಜಿ ಸಲ್ಲಿಸಲು ಸೂಚಿಸಿದೆ.
ಷರತ್ತುಗಳು: ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ದಿನಾಂಕಕ್ಕೆ ಕಾನೂನು ಪದವಿಯನ್ನು ಪಡೆದು 02 ವರ್ಷ ಮೀರಿರಬಾರದು. ತರಬೇತಿಯನ್ನು ಜಿಲ್ಲೆಯಲ್ಲಿಯೇ ಪಡೆಯಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದಂದು ಅಭ್ಯರ್ಥಿಯ ವಯಸ್ಸು 40 ವರ್ಷ ಮೀರಿರಬಾರದು. ಆಯ್ಕೆ ಮಾಡಲಾದ ಅಭ್ಯರ್ಥಿಗಳಿಗೆ ತರಬೇತಿ ಅವಧಿಯಲ್ಲಿ ಸರ್ಕಾರಿ ಆದೇಶದಂತೆ ರೂ.10,000/-ಗಳ ಶಿಷ್ಯ ವೇತನವನ್ನು ನೀಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳು ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್/ಸರ್ಕಾರಿ ವಕೀಲರು ಅಥವಾ 20 ವರ್ಷಗಳ ಕಾಲ ಕಡಿಮೆ ಇಲ್ಲದ ವಕೀಲ ವೃತ್ತಿಯಲ್ಲಿ ಸೇವೆ ಸಲ್ಲಿಸಿರುವ ನ್ಯಾಯವಾದಿಗಳ ಬಳಿ ತರಬೇತಿ ಪಡೆಯುತ್ತೀರಿ ಎಂಬ ಬಗ್ಗೆ ಲಿಖಿತ ರೂಪದಲ್ಲಿ ತಿಳಿಸಿರಬೇಕು. ತರಬೇತಿಯ ಅವಧಿ 02 ವರ್ಷವಿದ್ದು, ಆಯ್ಕೆಯಾದ ಅಭ್ಯರ್ಥಿಗಳು ಮಧ್ಯದಲ್ಲಿ ಬಿಡುವುದಿಲ್ಲ ಎಂದು, ಒಂದು ವೇಳೆ ಬಿಟ್ಟರೆ ತರಬೇತಿ ಅವಧಿಯಲ್ಲಿ ಪಡೆದಿರುವ ಶಿಷ್ಯ ವೇತನವನ್ನು ಶೇ.10ರಷ್ಟು ರೂಗಳ ಬಡ್ಡಿಯೊಂದಿಗೆ ಸರ್ಕಾರಕ್ಕೆ ಹಿಂತಿರುಗಿಸಿ ಮರುಪಾವತಿ ಮಾಡುವುದಾಗಿ ಮುಚ್ಚಳಿಕೆ ಬರೆದು ಕೊಡಬೇಕು. ಈ ನಿಯಮ ರಾಜ್ಯ ಮತ್ತು ಕೇಂದ್ರ ಸರ್ಕಾರದಲ್ಲಿ ನೌಕರಿ ಪಡೆದರೆ ಅನ್ವಯಿಸುವುದಿಲ್ಲ. ಆಯ್ಕೆಯಾದ ಅಭ್ಯರ್ಥಿಗಳು ಸುಳ್ಳು ಮಾಹಿತಿ ಹಾಗೂ ಸುಳ್ಳು ದಾಖಲೆಗಳನ್ನು ನೀಡಿ ಆಯ್ಕೆಯಾಗಿ ಶಿಷ್ಯ ವೇತನ ಪಡೆದರೆ ಅಂತಹ ಅಭ್ಯರ್ಥಿಗಳು ತರಬೇತಿ ಅವಧಿಯಲ್ಲಿ ಪಡೆದ ಶಿಷ್ಯ ವೇತನವನ್ನು ಒಟ್ಟಿಗೆ ಶೇ.10%ರೂಗಳ ಬಡ್ಡಿಯಲ್ಲಿ ಸರ್ಕಾರಕ್ಕೆ ಹಿಂತಿರುಗಿಸಿ ಕಟ್ಟಬೇಕು ತಪ್ಪಿದರೆ ಭೂ ಕಂದಾಯ ಬಾಕಿ ವಸೂಲಿಯಂತೆ ವಸೂಲಿ  ಮಾಡಲಾಗುತ್ತದೆ. ಸಂದರ್ಶನ ನಡೆಸುವ ಸ್ಥಳ ಮತ್ತು ದಿನಾಂಕವನ್ನು ಅಂಚೆಯ ಮೂಲಕ ತಿಳಿಸಲಾಗುತ್ತದೆ. ಆಯ್ಕೆಯನ್ನು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಪರಿಶೀಲಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿದೇರ್ಶಕರು ತಿಳಿಸಿದ್ದಾರೆ.

 

 

[t4b-ticker]

You May Also Like

More From Author

+ There are no comments

Add yours