ಕೇರಳದಲ್ಲಿ ಸುರಿದ ನಿರಂತರ ಭಾರಿ ಮಳೆಯಿಂದ ಶನಿವಾರ ಇಡುಕ್ಕಿ, ಕೊಟ್ಟಾಯಂ, ಪತ್ತನಂತಿಟ್ಟ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಪ್ರವಾಹ ಮತ್ತು ಭೂಕುಸಿತ ಸಂಭವಿಸಿದೆ. ಇಡುಕ್ಕಿ ಹಾಗೂ ಕೊಟ್ಟಾಯಂನಲ್ಲಿ ಸಂಭವಿಸಿದ ಪ್ರತ್ಯೇಕ ಭೂಕುಸಿತಗಳಲ್ಲಿ ಮೂವರು ಮೃತಪಟ್ಟಿದ್ದು, ಹಲವು ಮಂದಿ ಸಿಲುಕಿಕೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.