ಯುವತಿ ಕಾಣೆ
ಚಿತ್ರದುರ್ಗ,ಜೂನ್14:
ಹೊಳಲ್ಕೆರೆ ತಾಲ್ಲೂಕು ಕೊಳಾಳ್ ಗ್ರಾಮದ ಕೆ. ಮೇಘ (20) ಎಂಬ ಯುವತಿ ಜೂನ್ 09 ರಂದು ಕಾಣೆಯಾಗಿರುವ ಪ್ರಕರಣ ಚಿತ್ರಹಳ್ಳಿ ಗೇಟ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಕಾಣೆಯಾದ ಯುವತಿಯ ಚಹರೆ ಇಂತಿದೆ. 5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಕೋಲುಮುಖ, ಎಣ್ಣೆಗೆಂಪು ಬಣ್ಣ, ಸುಮಾರು 4.5 ಅಡಿ ಎತ್ತರ ಇರುತ್ತಾಳೆ. ಕನ್ನಡ ಭಾಷೆ ಮಾತನಾಡುತ್ತಾಳೆ. ಮನೆಯಿಂದ ಹೋಗುವಾಗ ಅರೆಂಜ್ ಬಣ್ಣದ ನೈಟಿ ಧರಿಸಿರುತ್ತಾಳೆ.
ಕಾಣೆಯಾದ ಯುವತಿ ಪತ್ತೆಯಾದಲ್ಲಿ ಚಿತ್ರಹಳ್ಳಿ ಗೇಟ್ ಪೊಲೀಸ್ ಠಾಣೆಗೆ ಸಂಪರ್ಕಿಸಬಹುದು ಎಂದು ಚಿತ್ರಹಳ್ಳಿ ಗೇಟ್ ಪೊಲೀಸ್ ಠಾಣೆಯ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
+ There are no comments
Add yours