ಗುಡ್ ನ್ಯೂಸ್:ವಸತಿ ನಿರ್ಮಾಣಕ್ಕೆ ಅರ್ಜಿ ಆಹ್ವಾನ

 

 

 

 

ಚಿತ್ರದುರ್ಗ, ಫೆಬ್ರವರಿ11:
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಡಿ 2021-22 ನೇ ಸಾಲಿನ ಪರಿಶಿಷ್ಟ ಪಂಗಡದ ಅಲೆಮಾರಿ, ಅರೆಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯಗಳಿಗೆ, ದೌರ್ಜನ್ಯ ಸಂತ್ರಸ್ತರಿಗೆ, ಮಾಜಿ ದೇವದಾಸಿಯರಿಗೆ, ಅಂತರ್ಜಾತಿ ವಿವಾಹಿತ ದಂಪತಿಗಳಿಗೆ, ವಿಧವೆಯರು, ಒಂಟಿ ಮಹಿಳೆಯರು, ಮೀನುಗಾರರಿಗೆ ವಸತಿರಹಿತ ನಿವೇಶನ ಹೊಂದದ ಫಲಾಪೇಕ್ಷಿಗಳಿಗೆ ಮನೆ ನಿರ್ಮಿಸಿಕೊಡಲು ಮನೆ ನಿರ್ಮಾಣ ಯೋಜನೆಯಡಿಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ನಿಗಮದ ಜಿಲ್ಲಾ ಕಚೇರಿಯಲ್ಲಿ ಆಫ್‍ಲೈನ್ ಅರ್ಜಿಯನ್ನು ಫೆಬ್ರವರಿ 05 ರಿಂದ ಫೆಬ್ರವರಿ 25 ರವರೆಗೆ  ಅರ್ಜಿಗಳನ್ನು ಪಡೆಯಬಹುದು ಹಾಗೂ ಆನ್ ಲೈನ್  ಅರ್ಜಿಯನ್ನು ಫೆಬ್ರವರಿ 07 ರಿಂದ ಫೆಬ್ರವರಿ 28 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಸೌಲಭ್ಯ ಪಡೆಯಲು ಇರಬೇಕಾದ ಸಾಮಾನ್ಯ ಅರ್ಹತೆಗಳು: ಅರ್ಜಿದಾರರು ಪರಿಶಿಷ್ಟ ಪಂಗಡದ ಅಲೆಮಾರಿ ಸಮುದಾಯಕ್ಕೆ ಸೇರಿದವರಾಗಿರಬೇಕು, ಹಾಗೂ ಕನಿಷ್ಠ 15 ವರ್ಷಗಳಿಂದ ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು, ಅರ್ಜಿದಾರರು 18 ವರ್ಷ ಮೇಲ್ಪಟ್ಟ ವರಾಗಿರಬೇಕು, ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನವು ಗ್ರಾಮೀಣ ಪ್ರದೇಶದಲ್ಲಿ 98000 ನಗರ ಪ್ರದೇಶದಲ್ಲಿ 120000 ಆಗಿರಬೇಕು, ಕುಟುಂಬದ ಯಾವುದೇ ಸದಸ್ಯರು ಸರ್ಕಾರಿ ಅರೆ ಸರ್ಕಾರಿ ಸಂಸ್ಥೆಯಲ್ಲಿ ನೌಕರಿಯಲ್ಲಿ ಇರಬಾರದು. ಜಿಲ್ಲೆಯಲ್ಲಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಈಗಾಗಲೇ ನೋಂದಣಿ ಮಾಡಿಕೊಂಡಿರುವ ಪರಿಶಿಷ್ಟ ಪಂಗಡದ ಅಂಗವಿಕಲ ಫಲಾನುಭವಿಗಳ ಲಭ್ಯವಿರುವ ಪಟ್ಟಿಯಿಂದ ಅಂಗವಿಕಲರನ್ನು ನೇರವಾಗಿ ಸಂದರ್ಶನ ಮಾಡಿ ಶೇಕಡ 5 ರಷ್ಟು ಮೀಸಲಾತಿ ಸೌಲಭ್ಯ ಕಲ್ಪಿಸಲಾಗುವುದು.
ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲಾತಿಗಳು: ಇತ್ತೀಚಿನ ಪಾಸ್‍ಫೋರ್ಟ್ ಅಳತೆಯ ಭಾವಚಿತ್ರ, ಜಾತಿ ಪ್ರಮಾಣ ಪತ್ರ , ಕುಟುಂಬದ ವಾರ್ಷಿಕ ವರಮಾನ ಪತ್ರ, ಪಡಿತರ ಚೀಟಿ, ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್ ಬುಕ್, ನಿರಪೇಕ್ಷಣಾ ಪತ್ರ, ಖಾತೆ, ಸೈಟ್ ನಿವೇಶನಕ್ಕೆ ಸಂಬಂಧಪಟ್ಟ ದಾಖಲಾತಿಗಳು ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಸರಸ್ವತಿಪುರಂ ಮುಖ್ಯ ರಸ್ತೆ, ಚಿತ್ರದುರ್ಗ ಹಾಗೂ ವೆಬ್ ಸೈಟ್ ತಿತಿತಿ./ಞಚಿಡಿಟಿಚಿಣಚಿಞಚಿ.gov.iಟಿ/ಞmvsಣಜಛಿಟ ಸಂಪರ್ಕಿಸಬಹುದೆಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ

 

 

[t4b-ticker]

You May Also Like

More From Author

+ There are no comments

Add yours