ಗ್ರಂಥಾಲಯ ಸ್ಪರ್ಧಾತ್ಮಕ ಓದುಗರಿಗೆ ಸಾಮಾನ್ಯ ಜ್ಞಾನದ ಪರೀಕ್ಷೆ

 

 

 

 

ಕುವೆಂಪು ಜನ್ಮ ದಿನೋತ್ಸವದ ಅಂಗವಾಗಿ ಆಯೋಜನೆ
ಗ್ರಂಥಾಲಯ ಸ್ಪರ್ಧಾತ್ಮಕ ಓದುಗರಿಗೆ ಸಾಮಾನ್ಯ ಜ್ಞಾನದ ಪರೀಕ್ಷೆ
***
ಚಿತ್ರದುರ್ಗ, ಡಿಸೆಂಬರ್27:
ಕುವೆಂಪು ಜನ್ಮ ದಿನೋತ್ಸವದ ಅಂಗವಾಗಿ ಚಿತ್ರದುರ್ಗ ನಗರ ಕೇಂದ್ರ ಗ್ರಂಥಾಲಯದಲ್ಲಿ ಹಾಗೂ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಪಕ್ಕದಲ್ಲಿನ ಸ್ಪರ್ಧಾತ್ಮಕ ಅಧ್ಯಯನ ಕೇಂದ್ರದ ಗ್ರಂಥಾಲಯದಲ್ಲಿ ಓದುವ ಸ್ಪರ್ಧಾತ್ಮಕ ಓದುಗರಿಗೆ ಸೋಮವಾರ ಸಾಮಾನ್ಯ ಜ್ಞಾನದ ಪರೀಕ್ಷೆ ನಡೆಸಲಾಯಿತು.
ಸಾರ್ವಜನಿಕ ಗ್ರಂಥಾಲಯ ಇಲಾಖೆ, ಚಿತ್ರದುರ್ಗ ಜಿಲ್ಲಾ ಹಾಗೂ ನಗರ ಕೇಂದ್ರ ಗ್ರಂಥಾಲಯ ಹಾಗೂ ದಾವಣಗೆರೆ ಚಾಣಕ್ಯ ಕೋಚಿಂಗ್ ಸೆಂಟರ್ ಇವರುಗಳ ಸಹಯೋಗದೊಂದಿಗೆ ಸ್ಪರ್ಧಾತ್ಮಕ ಓದುಗರಿಗೆ ಸಾಮಾನ್ಯ ಜ್ಞಾನ ಮಾದರಿ ಸ್ಪರ್ಧಾತ್ಮಕ ಪರೀಕ್ಷೆ ಆಯೋಜಿಸಲಾಯಿತು.
ಕುವೆಂಪು ಜನ್ಮ ದಿನೋತ್ಸವದ ಅಂಗವಾಗಿ ಚಿತ್ರದುರ್ಗ ನಗರ ಕೇಂದ್ರ ಗ್ರಂಥಾಲಯದಲ್ಲಿ ಓದುವ ಸ್ಪರ್ಧಾತ್ಮಕ ಆಕಾಂಕ್ಷಿಗಳಿಗೆ ಹಾಗೂ ಸ್ಪರ್ಧಾತ್ಮಕ ಓದುಗರಿಗೆ ಸಾಮಾನ್ಯ ಜ್ಞಾನದ ಪರೀಕ್ಷೆಯನ್ನು ನಡೆಸಲಾಗುತ್ತಿದ್ದು, ನಗರ ಕೇಂದ್ರ ಗ್ರಂಥಾಲಯದಲ್ಲಿ 60 ಮಂದಿ ಓದುಗರು ಹಾಗೂ ಸ್ಪರ್ಧಾತ್ಮಕ ಅಧ್ಯಯನ ಕೇಂದ್ರದಲ್ಲಿ 49 ಗ್ರಂಥಾಲಯ ಓದುಗ ಸದಸ್ಯರು ಸೇರಿದಂತೆ ಒಟ್ಟು 109 ಮಂದಿ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಿದ್ದಾರೆ ಎಂದು ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಪಿ.ಆರ್.ತಿಪ್ಪೇಸ್ವಾಮಿ ಮಾಹಿತಿ ನೀಡಿದರು.
ಸ್ಪರ್ಧಾತ್ಮಕ ಓದುಗರಿಗೆ 100 ಅಂಕಗಳಿಗೆ ಸಾಮಾನ್ಯ ಜ್ಞಾನದ ಪರೀಕ್ಷೆಯನ್ನು ವ್ಯವಸ್ಥಿತವಾಗಿ ಹಾಗೂ ಪಾರದರ್ಶಕವಾಗಿ ನಡೆಸಲಾಗುತ್ತಿದ್ದು, ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹಾಜರಾಗಿ ಹೆಚ್ಚಿನ ಅಂಕಗಳಿಸಿದ ನಗರದ ಕೇಂದ್ರ ಗ್ರಂಥಾಲಯದ ನಾಲ್ಕು ಮಂದಿ ಸ್ಪರ್ಧಾತ್ಮಕ ಓದುಗರಿಗೆ ಹಾಗೂ ಸ್ಪರ್ಧಾತ್ಮಕ ಅಧ್ಯಯನ ಕೇಂದ್ರದ ನಾಲ್ಕು ಮಂದಿ ಸೇರಿದಂತೆ ಒಟ್ಟು ಎಂಟು ಮಂದಿ ಸ್ಪರ್ಧಾತ್ಮಕ ಓದುಗರಿಗೆ ಇದೇ ಡಿಸೆಂಬರ್ 30ರಂದು ಪ್ರಮಾಣ ಪತ್ರ, ನೆನಪಿನ ಕಾಣಿಕೆ ಹಾಗೂ ಪುಸ್ತಕಗಳನ್ನು ವಿತರಿಸಲಾಗುವುದು ಎಂದು ತಿಳಿಸಿದರು.
ಪರೀಕ್ಷಾ ಮೇಲ್ವಿಚಾರಕರಾಗಿ ದಾವಣಗೆರೆ ಚಾಣಕ್ಯ ಕೋಚಿಂಗ್ ಸೆಂಟರ್‍ನ ಉಪನ್ಯಾಸಕರಾದ ಸಂಜು ಮೈದೂರ್ ಜೆ, ಸುಧಾಕರ್, ನಿವೃತ್ತ ಉಪನ್ಯಾಸಕರಾದ ಸಿ.ಬಿ.ಶೈಲಾ, ಗ್ರಂಥಾಲಯ ಸಿಬ್ಬಂದಿಗಳಾದ ಹೇಮಲತಾ, ಗೋಪಾಲ್ ಕಾರ್ಯನಿರ್ವಹಿಸಿದರು. ಈ ಸಂದರ್ಭದಲ್ಲಿ ಗ್ರಂಥಾಲಯ ಸಿಬ್ಬಂದಿ ಉಪಸ್ಥಿತರಿದ್ದರು.

 

 

 

[t4b-ticker]

You May Also Like

More From Author

+ There are no comments

Add yours