ಚಿತ್ರದುರ್ಗ,ಜನವರಿ01:
ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಹಾನಗಲ್ ಕಟ್ಟಡದ ಉದ್ಘಾಟನಾ ಸಮಾರಂಭವನ್ನು ಜನವರಿ 02ರಂದು ಬೆಳಿಗ್ಗೆ 11 ಗಂಟೆಗೆ ಹಾನಗಲ್ ಪ್ರವಾಸಿ ಮಂದಿರದ ಮುಂಭಾಗದಲ್ಲಿ ಹಮ್ಮಿಕೊಳ್ಳಲಾಗಿದೆ.
ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಹಾಗೂ ಉನ್ನತ ಶಿಕ್ಷಣ ಹಾಗೂ ಇಲೆಕ್ಟ್ರಾನಿಕ್ಸ್ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವರಾದ ಸಿ.ಎನ್.ಅಶ್ವಥ್ ನಾರಾಯಣ ಘನ ಉಪಸ್ಥಿತಿವಹಿಸುವರು.
ಸಾರಿಗೆ ಹಾಗೂ ಪರಿಶಿಷ್ಟವರ್ಗಗಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಕಾರ್ಯಕ್ರಮ ಉದ್ಘಾಟಿಸುವರು. ಹಾನಗಲ್ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಆರ್.ಜಯಶೀಲ ನಾಗರಾಜ, ವಿಧಾನ ಪರಿಷತ್ ಸದಸ್ಯರಾದ ಜಿ.ರಘುಆಚಾರ್, ಚಿದಾನಂದ ಎಂ.ಗೌಡ, ಡಾ.ವೈ.ಎ.ನಾರಾಯಣಸ್ವಾಮಿ, ಹಾನಗಲ್ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಓಬಕ್ಕ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಕೌಶಾಲ್ಯಾಭಿವೃದ್ಧಿ ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಸೆಲ್ವಕುಮಾರ್, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಆಯುಕ್ತರಾದ ಕೆ.ಜ್ಯೋತಿ, ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕೆ.ನಂದಿನಿದೇವಿ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ನಿರ್ದೇಶಕ ಎಸ್.ಯೋಗೇಶ್ವರ್, ಜಂಟಿನಿರ್ದೇಶಕರಾದ ಕೆ.ನಾಗೇಶ್, ಸಿ.ಪಿ.ಲಕ್ಷ್ಮೀ, ಮೊಳಕಾಲ್ಮುರು ಹಾನಗಲ್ ಕೈಗಾರಿಕಾ ತರಬೇತಿ ಸಂಸ್ಥೆ ಪ್ರಾಚಾರ್ಯ ಟಿ.ತಿಮ್ಮಣ್ಣ, ನಿರ್ಮಿತಿ ಕೇಂದ್ರ ಯೋಜನಾ ನಿರ್ದೇಶಕ ಕೆ.ಜಿ.ಮೂಡಲಗಿರಿಯಪ್ಪ ಭಾಗವಹಿಸಲಿದ್ದಾರೆ.
[t4b-ticker]
+ There are no comments
Add yours