ದುರ್ಗದಲ್ಲಿ ಡಿ.7ರಂದು ಗಿರಿಜನ ಉತ್ಸವ

 

 

 

 

ಡಿ.7ರಂದು ಗಿರಿಜನ ಉತ್ಸವ
ಚಿತ್ರದುರ್ಗ, ಡಿಸೆಂಬರ್06:
ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಗಿರಿಜನ ಉತ್ಸವ ಕಾರ್ಯಕ್ರಮವನ್ನು ಡಿಸೆಂಬರ್ 7 ರಂದು ಮಧ್ಯಾಹ್ನ 12 ಗಂಟೆಗೆ ನಗರದ ತರಾಸು ರಂಗಮಂದಿರದಲ್ಲಿ ಆಯೋಜಿಸಲಾಗಿದೆ.
ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಕಾರ್ಯಕ್ರಮ ಉದ್ಘಾಟಿಸುವರು. ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ನಾಗೇಂದ್ರನಾಯ್ಕ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕೆ.ನಂದಿನಿದೇವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ, ಚಿತ್ರದುರ್ಗ ಸರ್ಕಾರಿ ಕಲಾ ಕಾಲೇಜು ಪ್ರಾಂಶುಪಾಲ ಡಾ.ಹೆಚ್.ಗುಡ್ಡದೇಶ್ವರಪ್ಪ, ದಾವಣಗೆರೆ ವಿವಿ ಜಿ.ಆರ್.ಹಳ್ಳಿ ಸ್ನಾತಕೋತ್ತರ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಹೆಚ್.ಜಿ.ವಿಜಯಕುಮಾರ್ ಭಾಗವಹಿಸಲಿದ್ದಾರೆ.
ಚಿತ್ರದುರ್ಗ ಸರ್ಕಾರಿ ಕಲಾ ಕಾಲೇಜು ಸ್ನಾತಕೋತ್ತರ ಕನ್ನಡ ವಿಭಾಗ ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಉಪನ್ಯಾಸ ನೀಡುವರು.
ಗಿರಿಜನ ಉತ್ಸವದ ಅಂಗವಾಗಿ ಬೆಳಗ್ಗೆ 10 ಗಂಟೆಗೆ ಚಿತ್ರದುರ್ಗ ನಗರದ ಉಚ್ಚಂಗಿಯಲ್ಲಮ್ಮ ದೇವಸ್ಥಾನದಿಂದ ಕಲಾ ತಂಡಗಳ ಮೆರವಣಿಗೆ ಆರಂಭವಾಗಲಿದ್ದು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಟಿ.ಹೆಚ್.ನಾಗೇಂದ್ರನಾಯ್ಕ್ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ.
ಗಿರಿಜನ ಉತ್ಸವದ ಅಂಗವಾಗಿ ಜಾನಪದ ಗೀತೆ, ಸುಗಮ ಸಂಗೀತ, ತತ್ವಪದ, ಸೋಬಾನೆ ಪದ, ಭಜನೆ, ಕೋಲಾಟ, ವೀರಗಾಸೆ ಸೇರಿದಂತೆ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ಧನಂಜಯ ತಿಳಿಸಿದ್ದಾರೆ.
======

 

 

[t4b-ticker]

You May Also Like

More From Author

+ There are no comments

Add yours