ನಿಮ್ಮನೇ ಬಾಗಿಲಿಗೆ ಕಂದಾಯ ಇಲಾಖೆ ಬರುತ್ತೆ, ಎಲ್ಲಾ ದಾಖಲೆ‌ ತರುತ್ತೆ: ತಹಶೀಲ್ದಾರ್ ಎನ್.ರಘುಮೂರ್ತಿ

 

 

 

 

ಚಳ್ಳಕೆರೆ: ಚಳ್ಳಕೆರೆ ಕ್ಷೇತ್ರ ಹಾಗೂ ಮೊಳಕಾಲ್ಮೂರು ಕ್ಷೇತ್ರದ ಗ್ರಾಮೀಣ ಪ್ರದೇಶದ ಹಳ್ಳಿಯ ಜನ ಕಂದಾಯ ಇಲಾಖೆ ಹಲವು ದಾಖಲೆಗಳಾದ ಪಹಣಿ ,ಅಟ್ಲಾಸ್, ಆದಾಯ ಜಾತಿ ಪ್ರಮಾಣ ಪತ್ರ ಮತ್ತು ಇತರೆ ಕಂದಾಯ ದಾಖಲೆಗಳಿಗೆ ತಾಲೂಕು ಕಚೇರಿಗೆ ಅಲೆದಾಡಿಸುವುದನ್ನು ತಪ್ಪಿಸುವ ಸಲುವಾಗಿ ಸರ್ಕಾರ ನೂತನ ಕಾರ್ಯಕ್ರಮವನ್ನ ಕಂದಾಯ ದಾಖಲೆಗಳು ರೈತರ ಮನೆ ಬಾಗಿಲಿಗೆ ಎಂಬ ವಿನೂತನ ಕಾರ್ಯಕ್ರಮವನ್ನು ರಾಜ್ಯ ವ್ಯಾಪ್ತಿ ಜಾರಿಗೆ ತಂದಿದೆ ಎಂದು ತಹಶೀಲ್ದಾರ್ ಎನ್.ರಘುಮೂರ್ತಿ ಹೇಳಿದರು‌

 

 

ತಹಶೀಲ್ದಾರ್ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ ಚಳ್ಳಕೆರೆ ಹಾಗೂ ಮೊಳಕಾಲ್ಮೂರು ಕ್ಷೇತ್ರದ ಸಚಿವರು ಹಾಗೂ ಶಾಸಕರು ಹಾಗೂ ಚಿತ್ರದುರ್ಗ ಜಿಲ್ಲಾಧಿಕಾರಿಗಳ ಆದೇಶದಂತೆ ಅಧಿಕಾರಿಗಳೇ ರೈತರ ಮನೆ ಬಾಗಿಲಿಗೆ ಎನ್ನುವ ಕಾರ್ಯಕ್ರಮದಲ್ಲಿ ಹಲವು ಸೌಲಭ್ಯಗಳನ್ನು ರೈತರಿಗೆ ನೀಡಲು ಮುಂದಾಗಿ ಇರುವುದಾಗಿ ಎಂದರು. ಈ ಕಾರ್ಯಕ್ರಮದಲ್ಲಿ ತಾಲೂಕಿನ ಎಲ್ಲಾ ಗ್ರಾಮಗಳಲ್ಲಿ ಇರುವಂತಹ ಚುನಾಯಿತ ಪ್ರತಿನಿಧಿಗಳು ಅಧಿಕಾರಿಗಳೊಂದಿಗೆ ಭಾಗಿಯಾಗಿ ಸಂಬಂಧಿಸಿದ ಎಲ್ಲ ರೈತರಿಗೂ ಈ ಸೌಲಭ್ಯವನ್ನು ಒದಗಿಸುವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸರ್ಕಾರಿ ವ್ಯವಸ್ಥೆ ಮತ್ತು ಚುನಾಯಿತ ಪ್ರತಿನಿಧಿಗಳ ಮೇಲೆ ಸಾರ್ವಜನಿಕರಿಗೆ ವಿಶ್ವಾಸ ಮತ್ತು ನಂಬಿಕೆ ಮೂಡುವ ನಿಟ್ಟಿನಲ್ಲಿ ಸರ್ಕಾರಿ ಸೌಲಭ್ಯಗಳನ್ನು ಪ್ರತಿಯೊಬ್ಬರಿಗೂ ಒದಗಿಸಲು ಪಣ ತೊಡಬೇಕು,  ಈ‌ ವಿನೂತನ ಕಾರ್ಯಕ್ರಮ  ತಾಲೂಕಿನ ಗೊರ್ಲಕಟ್ಟೆ ಗ್ರಾಮದಲ್ಲಿ 12 ನೇತಾರೀಖು ನಂದು ಪ್ರಾರಂಭವಾಗಲಿದ್ದು ಶಾಸಕರಾದ ಟಿ.ರಘುಮೂರ್ತ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.  ಹಾಗೆಯೇ ಇದೇ ದಿನದೊಂದು ತಾಲೂಕಿನ ಉಳಿದಂತೆ ಎಲ್ಲಾ ಗ್ರಾಮಗಳಲ್ಲಿ ಏಕಕಾಲದಲ್ಲಿ ರೈತರುಗಳಿಗೆ ಕಂದಾಯ ದಾಖಲೆಗಳನ್ನು ವಿತರಣೆ ಮಾಡುವ ಕಾರ್ಯಕ್ರಮವು ಪ್ರಾರಂಭವಾಗುತ್ತದೆ. ಪತ್ರಿಕಾಗೋಷ್ಠಿಯಲ್ಲಿ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಕೋಡಿ  ಭೀಮರಾಯ್, ರಾಜಸ್ವ ನಿರೀಕ್ಷಕ ಚೇತನ್ ಕುಮಾರ್, ಪಟ್ಟಣ ಪಂಚಾಯತಿ ಸದಸ್ಯರಾದ ಕೆಪಿ ತಿಪ್ಪೇಸ್ವಾಮಿ ಮಾಜಿ ಪಟ್ಟಣ ಪಂಚಾಯತಿ ಸದಸ್ಯರಾದ ಟಿ ಬಸಣ್ಣ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಇದ್ದರು.

[t4b-ticker]

You May Also Like

More From Author

+ There are no comments

Add yours