ನಿಮ್ಮೂರಲ್ಲಿ ಸ್ಮಶಾನ ಇಲ್ವ, ಸರ್ಕಾರಿ ಭೂಮಿ ಒತ್ತುವರಿ ಆಗಿದೆಯಾ ಜಿಲ್ಲಾಧಿಕಾರಿಗೆ ಅರ್ಜಿ ಕೊಟ್ಟರೆ ಪರಿಹಾರ

 

 

 

 

ಚಿತ್ರದುರ್ಗ,ಫೆಬ್ರವರಿ05:
ರಾಜ್ಯದಲ್ಲಿನ ಗ್ರಾಮ ಮತ್ತು ನಗರ ಪ್ರದೇಶಗಳಲ್ಲಿ ಸ್ಮಶಾನ ಭೂಮಿ ಕಲ್ಪಿಸುವುದು ಸರ್ಕಾರದ ಮೂಲ ಉದ್ದೇಶವಾಗಿದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದ್ದಾರೆ.
ಸ್ಮಶಾನ ಭೂಮಿ ಕಲ್ಪಿಸಲು ಇರುವ ನಿಯಮಗಳು ಇಂತಿವೆ. ಸರ್ಕಾರದ ಜಮೀನು ಲಭ್ಯವಿರುವ ಕಡೆ ಸ್ಮಶಾನ ಉದ್ದೇಶಕ್ಕಾಗಿ ಎರಡು ಎಕರೆ ವಿಸ್ತೀರ್ಣದ ಜಮೀನನ್ನು ಕಾಯ್ದಿರಿಸುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ಪ್ರತ್ಯಾಯೋಜಿಸಲಾಗಿದೆ. ಕರ್ನಾಟಕ ಭೂ ಕಂದಾಯ ಕಾಯ್ದೆ 1964 ರ ಕಲಂ 71ರ ಅಡಿ ಪ್ರದತ್ತವಾದ ಅಧಿಕಾರದ ಅನ್ವಯ ಜಿಲ್ಲಾಧಿಕಾರಿಗಳು ರಾಜ್ಯದಲ್ಲಿ ಸರ್ಕಾರಿ ಜಮೀನು ಕಾಯ್ದಿರಿಸಲು ಅವಕಾಶ ಕಲ್ಪಿಸಲಾಗಿದೆ. ಗೋಮಾಳ ಜಮೀನು ನಿಗದಿತ ಪ್ರಮಾಣಕ್ಕಿಂತ ಕಡಿಮೆ ಇದ್ದಾಗ್ಯೂ ಸ್ಮಶಾನಕ್ಕಾಗಿ ಮೀಸಲಿಡಲು ಕರ್ನಾಟಕ ಭೂ ಕಂದಾಯ ನಿಯಮಗಳು 1966ರ ನಿಯಮ 97(4) (iii) ರಲ್ಲಿ ಜಿಲ್ಲಾಧಿಕಾರಿಯವರಿಗೆ ಅವಕಾಶ ಕಲ್ಪಿಸಲಾಗಿದೆ. ಸರ್ಕಾರಿ ಜಮೀನು “ಬ” ಕರಾಬು ಎಂದು ವರ್ಗೀಕೃತವಾಗಿದ್ದಲ್ಲಿ ಸ್ಮಶಾನದ ಉದ್ದೇಶವು ಸಾರ್ವಜನಿಕ ಉದ್ದೇಶವಾಗಿರುವುದರಿಂದ ಅಂತಹ ಜಮೀನುಗಳನ್ನು ಸಹ ಜಿಲ್ಲಾಧಿಕಾರಿಗಳ ಹಂತದಲ್ಲಿಯೇ ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ 71 ರನ್ವಯ ಕಾಯ್ದಿರಿಸಲು ಅವಕಾಶ ಕಲ್ಪಿಸಲಾಗಿದೆ. ಒತ್ತುವರಿಯಿಂದ ತೆರವುಗೊಳಿಸಿರುವ ಸರ್ಕಾರಿ ಜಮೀನುಗಳನ್ನು ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 71ರನ್ವಯ ಜಿಲ್ಲಾಧಿಕಾರಿಗಳು ಸ್ಮಶಾನದ ಉದ್ದೇಶಕ್ಕಾಗಿ ಕಾಯ್ದಿರಿಸಲು ಅವಕಾಶ ಕಲ್ಪಿಸಲಾಗಿದೆ. ಸರ್ಕಾರಿ ಜಮೀನಿನಲ್ಲಿ ಅನಧಿಕೃತವಾಗಿ ಮಾಡುತ್ತಿರುವ ಸಾಗುವಳಿಯನ್ನು ಸಕ್ರಮೀಕರಣಕ್ಕಾಗಿ ಸಲ್ಲಿಸುವ ಅರ್ಜಿಗಳ ಪೈಕಿ ಅನರ್ಹ ಅರ್ಜಿಗಳು ಇದ್ದಲ್ಲಿ ಜಿಲ್ಲಾಧಿಕಾರಿಗಳ ಹಂತದಲ್ಲಿ ಅಂತಹ ಅರ್ಜಿಗಳನ್ನು ವಜಾಗೊಳಿಸಿ ಜಮೀನನ್ನು ಸರ್ಕಾರದ ವಶಕ್ಕೆ ಪಡೆದು ಕಾಯ್ದಿರಿಸುವುದು. ಈ ಎಲ್ಲಾ ಕ್ರಮಗಳನ್ನು ಕೈಗೊಂಡ ನಂತರವೂ ಸಹ ಯಾವುದೇ ಗ್ರಾಮದಲ್ಲಿ ಸ್ಮಶಾನಕ್ಕಾಗಿ ಕಾಯ್ದಿರಿಸಲು ಸರ್ಕಾರಿ ಜಮೀನು ಲಭ್ಯ ಇಲ್ಲದೇ ಇದ್ದಲ್ಲಿ ಅಂತಹ ಗ್ರಾಮಗಳಲ್ಲಿ ಮಾರ್ಗಸೂಚಿ ಮೌಲ್ಯದ ಮೂರುಪಟ್ಟು ದರದಲ್ಲಿ ಖಾಸಗಿಯವರಿಂದ ಜಮೀನುಗಳನ್ನು ಖರೀದಿಸಲು ಅವಕಾಶ ಕಲ್ಪಿಸಲಾಗಿದೆ. ತಮ್ಮ ಗ್ರಾಮಗಳಲ್ಲಿ ಸ್ಮಶಾನದ ಅವಶ್ಯಕತೆ ಇದ್ದಲ್ಲಿ ಜಿಲ್ಲಾಧಿಕಾರಿಗಳಿಗೆ ಅಥವಾ ತಹಶೀಲ್ದಾರರಿಗೆ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.
ಸರ್ಕಾರಿ ಜಮೀನು ಒತ್ತುವರಿ: ಸರ್ಕಾರಿ ಜಮೀನು, ಕೆರೆ-ಕಟ್ಟೆ, ಕುಮಟೆ, ಹಳ್ಳ, ಸರೋವರ ಮತ್ತು ಇನ್ನಿತರೆ ಜಲಮೂಲಗಳು ಎಂದು ವರ್ಗೀಕೃತವಾದ ಜಮೀನುಗಳನ್ನು ಗ್ರಾಮ ನಕಾಶೆಯಲ್ಲಿ ರಸ್ತೆ, ಬೀದಿ, ಬಂಡಿದಾರಿ, ಓಣಿ ಅಥವಾ ಹಾದಿ ಎಂದು ನಮೂದಾಗಿರುವ ಇತರೆ ಎಲ್ಲಾ ಸರ್ಕಾರಿ ಜಮೀನುಗಳು ಒತ್ತುವರಿಯಾಗಿದ್ದಲ್ಲಿ ಸಾರ್ವಜನಿಕರು ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ಅಥವಾ ತಹಸೀಲ್ದಾರ್‍ಗೆ ದೂರು ನೀಡಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ತಿಳಿಸಿದ್ದಾರೆ.
======

 

 

[t4b-ticker]

You May Also Like

More From Author

+ There are no comments

Add yours