ಹೊಳಲ್ಕೆರೆ ಶಾಸಕ ಚಂದ್ರಪ್ಪ ಕುಟುಂಬದ ವಿರುದ್ಧ ಬ್ಲಾಕ್ ಕಾಂಗ್ರೆಸ್ ವತಿಯಿಂದ ಹೊಳಲ್ಕೆರೆಯಲ್ಲಿ ಪ್ರತಿಭಟನೆ

 

 

 

 

 

ಚಿತ್ರದುರ್ಗ (ಹೊಳಲ್ಕೆರೆ):

 

 

ಅಮಾಯಕರ ಆಸ್ತಿ ಕಬಳಿಸಿ ನ್ಯಾಯಾಲಯದಿಂದಲೇ ಎಫ್ಐಆರ್ ಹಾಕಿಸಿಕೊಂಡಿರುವ ಎಂ.ಚಂದ್ರಪ್ಪ ಕುಟುಂಬದ ವಿರುದ್ಧ ಬ್ಲಾಕ್ ಕಾಂಗ್ರೆಸ್ ವತಿಯಿಂದ ಹೊಳಲ್ಕೆರೆ ಪಟ್ಟಣದಲ್ಲಿ ಮೇ 10ರಂದು ಮಂಗಳವಾರ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಪಟ್ಟಣದ ಕಾಂಗ್ರೆಸ್ ಕಚೇರಿ ಬಳಿ  ಬೆಳಗ್ಗೆ 10 ಗಂಟೆಗೆ ಪ್ರತಿಭಟನೆ ಆರಂಭವಾಗಿ ತಾಲೂಕು ಕಚೇರಿಗೆ ತೆರಳಿ ಮನವಿ ಸಲ್ಲಿಸಲಾಗುವುದು. ಜೊತೆಗೆ ಬಹಿರಂಗ ಸಭೆ ನಡೆಸಲಾಗುವುದು.

ಪ್ರತಿಭಟನಾ ಮೆರವಣಿಗೆಯಲ್ಲಿ ಮಾಜಿ ಸಚಿವರಾದ ಎಚ್.ಆಂಜನೇಯ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಮಾಜಿ ಶಾಸಕರಾದ ಎ.ವಿ.ಉಮಾಪತಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಕೆ.ತಾಜ್ ಪೀರ್, ಕಾರ್ಯಾಧ್ಯಕ್ಷರಾದ ಹಾಲಸ್ವಾಮಿ, ಸೇರಿದಂತೆ ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಹಾಲಿ-ಮಾಜಿ ಜನಪ್ರತಿನಿಧಿಗಳು, ಪಕ್ಷದ ಮುಖಂಡರು, ವಿವಿಧ ಜನಪರ ಸಂಘಟನೆಗಳ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.
ಮುಖ್ಯವಾಗಿ ಪಕ್ಷದ ಶಕ್ತಿ ಆಗಿರುವ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಎಂ.ಚಂದ್ರಪ್ಪ ವಿರುದ್ಧ ಪ್ರತಿಭಟನೆ ಯಶಸ್ವಿಗೊಳಿಸಬೇಕು ಎಂದು ಕಾರ್ಯಕರ್ತರು, ಮುಖಂಡರು, ಪದಾಧಿಕಾರಿಗಳಲ್ಲಿ ಕೋರುತ್ತೇನೆ.

*ಎಚ್.ಟಿ.ಹನುಮಂತಪ್ಪ*
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು
ಹೊಳಲ್ಕೆರೆ

[t4b-ticker]

You May Also Like

More From Author

+ There are no comments

Add yours