ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ಪೂರ್ಣ ಪ್ರಮಾಣದಲ್ಲಿ ನೇಮಕಕ್ಕೆ ಒತ್ತಾಯ

 

 

 

 

 

ವರದಿ: ಸುರೇಶ್ ಪಟ್ಟಣ್

 

 

ಚಿತ್ರದುರ್ಗ ಜ. ೦೪

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ಪೂರ್ಣ ಪ್ರಮಾಣದಲ್ಲಿ ನೇಮಕ ಮಾಡಿಕೊಂಡು ವಿದ್ಯಾರ್ಥಿಗಳಿಗೆ ಪೂರ್ಣ ಪ್ರಮಾಣದ ತರಗತಿಗಳನ್ನು ನಡೆಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ವಿದ್ಯಾರ್ಥಿಗಳು ಇಂದು ಪ್ರತಿಭಟನೆಯನ್ನು ನಡೆಸಿದರು.
ಈಗ ರಾಜ್ಯದಲ್ಲಿ ಪೂರ್ಣ ಪ್ರಮಾಣದ ತರಗತಿಗಳನ್ನು ನಡೆಸಲು ನೇಮಕವಾಗಿರುವ ಅತಿಥಿ ಉಪನ್ಯಾಸಕರುಗಳು ಸೇವಾ ಭದ್ರತೆ ಹಾಗೂ ಹೆಚ್ಚಿನ ಗೌರವಧನಕ್ಕಾಗಿ ಹೋರಾಟವನ್ನು ಕಳೆದ ೧೦ ರಿಂದ ಪ್ರಾರಂಭ ಮಾಡಿದ್ದಾರೆ ಇದರಿಂದಾಗಿ ವಿದ್ಯಾರ್ಥಿಗಳಿಗೆ ಸರಿಯಾದ ರೀತಿಯಲ್ಲಿ ಪಾಠ ನಡೆಯದೆ ತೊಂದರೆಯಾಗಿದೆ. ಕರೋನಾ ಎರಡನೇ ಅಲೆಗೆ ತತ್ತರಿಸಿ ಈಗ ಪ್ರಾರಂಭವಾಗಿರುವ ಕಾಲೇಜುಗಳಲ್ಲಿ ಸರಿಯಾದ ರೀತಿಯಲ್ಲಿ ಪಾಠ ನಡೆಯದೇ ಮಕ್ಕಳಿಗೆ ತೊಂದರೆಯಾಗಿದೆ ಇದ್ದಲ್ಲದೆ ಸರ್ಕಾರವೂ ಸಹಾ ಅತಿಥಿ ಉಪನ್ಯಾಸಕರನ್ನು ತಡವಾಗಿ ನೇಮಕ ಮಾಡಿದ್ದಲ್ಲದೆ ಶೇ. ೮೦ರಷ್ಟು ಮಾತ್ರ ಉಪನ್ಯಾಸಕರನ್ನು ಮಾತ್ರ ನೇಮಕ ಮಾಡಲಾಗಿದೆ ಎಂದು ಪ್ರತಿಭಟನಾಕಾರರು ದೂರಿದ್ದಾರೆ.
ಈ ತಿಂಗಳ ಕೊನೆಯಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಪ್ರಾರಂಭವಾಗಲಿದ್ದು, ಅದಷ್ಟು ಬೇಗ ಈ ಸಮಸ್ಯೆಗೆ ಪರಿಹಾರವನ್ನು ಕಂಡುಕೊAಡು ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೂಡಬೇಕಿದೆ. ಇದ್ದಲ್ಲದೆ ಉಳಿದ ಶೇ. ೨೦ ರಷ್ಟು ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಂಡು ವಿದ್ಯಾರ್ಥಿಗಳಿಗೆ ಪೂರ್ಣ ಪ್ರಮಾಣದ ತರಗತಿಗಳು ನಡೆಯುವಂತೆ ಕ್ರಮ ಕೈಗ್ಗೊಳ್ಳಬೇಕೆಂದು ಸರ್ಕಾರವನ್ನು ಎ.ಬಿ.ವಿ.ಪಿ. ಆಗ್ರಹಿಸಿದ್ದು, ಇದರ ಬಗ್ಗೆ ಶೀಘ್ರವಾಗಿ ಕ್ರಮ ತೆಗೆದುಕೊಳ್ಳದಿದ್ದರೆ ಮುಂದಿನ ದಿನದಲ್ಲಿ ಹೋರಾಟವನ್ನು ಮಾಡಬೇಕಾಗುತ್ತದೆ ಎಂದು ಎಚ್ಚರಿಕೆಯನ್ನು ಸಹಾ ನೀಡಲಾಯಿತು.
ಪ್ರತಿಭಟನೆಯ ನೇತೃತ್ವವನ್ನು ಜಿಲ್ಲಾ ಸಂಚಾಲಕರಾದ ಆದರ್ಶ ವಹಿಸಿದ್ದು ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

[t4b-ticker]

You May Also Like

More From Author

+ There are no comments

Add yours