ಮುಂಬರುವ ಏಕದಿನ ಪಂದ್ಯಕ್ಕೆ ರೋಹಿತ್ ಕ್ಯಾಪ್ಟನ್

ಮುಂಬರುವ ಏಕದಿನ ಪಂದ್ಯಕ್ಕೆ ರೋಹಿತ್ ಕ್ಯಾಪ್ಟನ್

Listen to this article

ಮುಂಬರುವ ದಕ್ಷಿಣ ಆಫ್ರಿಕಾ ಸರಣಿಗಾಗಿ ಟೀಮ್ ಇಂಡಿಯಾ ಏಕದಿನ ತಂಡದ ನಾಯಕನಾಗಿ ರೋಹಿತ್ ಶರ್ಮಾ ಅವರನ್ನು ಆಯ್ಕೆ ಮಾಡಲಾಗಿದೆ. ಈ ಮೂಲಕ ಏಕದಿನ ಹಾಗೂ ಟಿ20 ತಂಡಕ್ಕೆ ಹಿಟ್​ಮ್ಯಾನ್ ಅವರಿಗೆ ಕಪ್ತಾನನ ಸ್ಥಾನ ನೀಡಲಾಗಿದೆ. ಈ ಹಿಂದೆ ಟಿ20 ವಿಶ್ವಕಪ್ ಬಳಿಕ ವಿರಾಟ್ ಕೊಹ್ಲಿ ನಾಯಕನ ಸ್ಥಾನದಿಂದ ಕೆಳಗಿಳಿದಿದ್ದರು. ಇದಾಗ್ಯೂ ಕೊಹ್ಲಿ ಏಕದಿನ ಹಾಗೂ ಟೆಸ್ಟ್ ತಂಡದ ನಾಯಕನಾಗಿ ಮುಂದುವರೆಯುವುದಾಗಿ ತಿಳಿಸಿದ್ದರು. ಆದರೀಗ ವಿರಾಟ್ ಕೊಹ್ಲಿಯನ್ನು ಏಕದಿನ ತಂಡದ ನಾಯಕ ಸ್ಥಾನದಿಂದ ಕೂಡ ಕೆಳಗಿಳಿಸಲಾಗಿದೆ. ಬದಲಿಗೆ ರೋಹಿತ್ ಶರ್ಮಾ ಅವರನ್ನು ನಾಯಕನಾಗಿ ಆಯ್ಕೆ ಮಾಡಲಾಗಿದೆ. ಇನ್ನು ಕೊಹ್ಲಿ ಟೆಸ್ಟ್ ತಂಡದ ಕ್ಯಾಪ್ಟನ್ ಆಗಿ ಮಾತ್ರ ಮುಂದುವರೆಯಲಿದ್ದಾರೆ ಎಂದು ಭಾರತೀಯ ಕ್ರಿಕೆಟ್ ತಂಡದ ಆಯ್ಕೆ ಸಮಿತಿ ತಿಳಿಸಿದೆ

 

 

Trending Now

Leave a Reply

Your email address will not be published. Required fields are marked *

Trending Now