ಚಿತ್ರದುರ್ಗ (ಕರ್ನಾಟಕ ವಾರ್ತೆ) ಮೇ.13 :
2022-23ನೇ ಸಾಲಿಗೆ ಚಿತ್ರದುರ್ಗ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ ಮಾದರಿ, ಡಾ. ಬಿ. ಆರ್. ಅಂಬೇಡ್ಕರ್, ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗಳಲ್ಲಿ 7, 8 ಮತ್ತು 9ನೇ ತರಗತಿಗಳಲ್ಲಿ ಖಾಲಿ ಉಳಿದಿರುವ ಸ್ಥಾನಗಳ ದಾಖಲಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮೇ 19ರಂದು ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಆಸಕ್ತ ವಿದ್ಯಾರ್ಥಿಗಳು ಅರ್ಜಿಗಳನ್ನು ಜಿಲ್ಲೆಯ ಯಾವುದೇ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ ಮಾದರಿ, ಡಾ.ಬಿ.ಆರ್.ಅಂಬೇಡ್ಕರ್, ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗಳಲ್ಲ್ಲಿ ಉಚಿತವಾಗಿ ಪಡೆಯಬಹುದು.
ಅರ್ಜಿ ಸಲ್ಲಿಸಲು ಅಭ್ಯರ್ಥಿಯ ಜಾತಿ ಮತ್ತು ಆದಾಯ ಪ್ರಮಾಣಪತ್ರ, ಹಿಂದಿನ ತರಗತಿಯ ಅಂಕಪಟ್ಟಿ ಮತ್ತು ಪಾಸ್ಪೋರ್ಟ್ ಅಳತೆಯ ಭಾವಚಿತ್ರ ಅವಶ್ಯಕವಾಗಿರುತ್ತವೆ. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ತಮಗೆ ಸಮೀಪವಿರುವ ಯಾವುದೇ ವಸತಿ ಶಾಲೆಯಲ್ಲಿ ಕಚೇರಿ ವೇಳೆಯಲ್ಲಿ ಸಲ್ಲಿಸಬಹುದು. ಮೇ 19 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗೆ ಯಾವುದೇ ಯಾವುದೇ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ ಮಾದರಿ, ಡಾ.ಬಿ.ಆರ್.ಅಂಬೇಡ್ಕರ್, ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಗಳ ಪ್ರಾಂಶುಪಾಲರನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
[t4b-ticker]
+ There are no comments
Add yours