ವಾಕಿಂಗ್ ಮುಗಿಸಿ ಬಂದು ಹೃದಯಘಾತದಿಂದ ಕೊನೆಯುಸಿರೆಳೆದ ಡಿವೈಎಸ್ಪಿ ರಮೇಶ್.

 

 

 

 

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಕೇಂದ್ರದ  ಎಸ್ ಪಿ ಕಛೇರಿ ಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಡಿವೈಎಸ್ಪಿ (ಡಿಸಿಆರ್ ಬಿ) ರಮೇಶ್ (51) ಮಂಗಳವಾರ ಬೆಳಿಗ್ಗೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

 

 

ಎಂದಿನಂತೆ ನಿತ್ಯದ  ವಾಕಿಂಗ್ ಮುಗಿಸಿ ಮನೆಗೆ ಬಂದ ಮೇಲೆ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರು ತಾಯಿ, ಪತ್ನಿ, ಇಬ್ಬರು ಗಂಡು ಮಕ್ಕಳು ಸೇರಿದಂತೆ ಅಪಾರ ಬಂದು ಬಳಗದವರನ್ನು ಅಗಲಿದ್ದಾರೆ. ಇವರು ಮೂಲತಃ ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನವರು. ಎಸ್ಪಿ ರಾಧಿಕಾ ಸೇರಿದಂತೆ ಚಿತ್ರದುರ್ಗ ಪೊಲೀಸ್ ಇಲಾಖೆ ಸಿಬ್ಬಂದಿ ತೀವ್ರ ಸಂತಾಪ ಸೂಚಿಸಿದ್ದಾರೆ. ಅಂತ್ಯಕ್ರಿಯೆ ಎಲ್ಲಿ ಎಂಬ ಮಾಹಿತಿ ಇನ್ನು  ದೃಢಪಟ್ಟಿಲ್ಲ.

[t4b-ticker]

You May Also Like

More From Author

+ There are no comments

Add yours