ಶಾಸಕರಾದ ಪೂರ್ಣಿಮಾ ಶ್ರೀನಿವಾಸ್ ನೇತೃತ್ವದಲ್ಲಿ ಟಾಸ್ಕ್ ಪೋರ್ಸ್ ಸಮಿತಿ ಸಭೆ

 

 

 

 

ಟಾಸ್ಕ್ ಪೋರ್ಸ್ ಸಮಿತಿ ಸಭೆ
ಹಿರಿಯೂರು: ಹಿರಿಯೂರು ನಗರದ ಪ್ರವಾಸಿ ಮಂದಿರದಲ್ಲಿ ಶಾಸಕರಾದ ಪೂರ್ಣಿಮಾ ಶ್ರೀನಿವಾಸ್ ಅಧ್ಯಕ್ಷತೆಯಲ್ಲಿ ತಾಲೂಕಿನ ಟಾಸ್ಕ್ ಪೋರ್ಸ್ ಸಮಿತಿ ಸಭೆ ನಡೆಯಿತು, ಈ ಸಭೆಯಲ್ಲಿ ಶಾಸಕರು ಸಮಿತಿಯಲ್ಲಿರುವ ಅಧಿಕಾರಿಗಳಿಂದ ತಾಲೂಕಿನಲ್ಲಿ ಕುಡಿಯುವ ನೀರಿನ ತೊಂದರೆ ,ಇರುವ ಗ್ರಾಮಗಳಲ್ಲಿ ಕುಡಿಯುವ ನೀರನ್ನು ಒದಗಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿ, ಅಧಿಕಾರಿಗಳಿಂದ ಮಾಹಿತಿ ಪಡೆದರು, ಬೇಸಿಗೆ ಬರುತ್ತಿರುವುದರಿಂದ ತಾಲೂಕಿನಲ್ಲಿ ಕುಡಿಯುವ ನೀರಿಗೆ ಮತ್ತು ಜಾನುವರುಗಳಿಗೆ ತೊಂದರೆಯಾಗದಂತೆ ಗಮನ ಹರಿಸ ಬೇಕೆಂದು ಸೂಚನೆ ನೀಡಿದರು. ಮತ್ತು ತಾಲೂಕಿನಲ್ಲಿ ಕುಡಿಯುವ ನೀರಿನ ಕೊರತೆ ಇರುವ ಗ್ರಾಮಗಳಾದ ಬಬ್ಬೂರು, ಕೋಡಿಹಳ್ಳಿ, ಮೋರಾರ್ಜಿ ದೇಸಾಯಿ ವಸತಿ ಶಾಲೆ ಹಿಂಡಸಕಟ್ಟೆ, ಅಜ್ಜನಹಟ್ಟಿ, ವಿ‌ವಿ.ಪುರ , ಗೋಗುದ್ದು, ಹೊಸಯಳನಾಡು, ಮುಂತಾದ ಕಡೆಗಳಲ್ಲಿ ಕುಡಿಯುವ ನೀರು ಒದಗಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.ಹಾಳಾಗಿರುವ ಕೊಳವೆ ಭಾವಿಗಳನ್ನು ಸರಿ ಪಡಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ
ತಹಶೀಲ್ದಾರ್ ಶಿವಕುಮಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಈಶ್ವರ್ ಪ್ರಸಾದ್, ನಗರಸಭೆ ಆಯುಕ್ತರಾದ ಉಮೇಶ್, ಗ್ರಾಮೀಣ ಕುಡಿಯುವನೀರು ವಿಭಾಗದ ಎ. ಇ. ಇ .ಶಿವರಾಂ, ನಗರ ನೀರು ಸರಬರಾಜು ಇಲಾಖೆ ಎ.ಇ.ಇ ಅನಿಲ್ ಕುಮಾರ್, ಬೆಸ್ಕಾಂ, ಕಂದಾಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

 

 

[t4b-ticker]

You May Also Like

More From Author

+ There are no comments

Add yours