ಸಮಾಜ ಸುಧಾರಣೆಯಿಂದ ಹಿಡಿದು ಎಲ್ಲಾ ರಂಗದಲ್ಲಿ ಮಹಿಳೆ ಮುಂಚೂಣಿ: ಡಿಸಿ ಕವಿತಾ ಎಸ್.ಮನ್ನಿಕೇರಿ

 

 

 

 

ಚಿತ್ರದುರ್ಗ, ಮಾರ್ಚ್ 08:
ಅಡುಗೆ ಮನೆಯಿಂದ ಹಿಡಿದು ಆಕಾಶದೆತ್ತರಕ್ಕೆ ಹೋಗುವುದರಿಂದ ಹಿಡಿದು ಯಾವುದಕ್ಕೂ ಹಿಂಜರಿಯದೆ ಮನೆಯಲ್ಲಿ ಜವಾಬ್ದಾರಿಯನ್ನು ನಿಭಾಯಿಸಿ ಹೊರಗಿನ ಕೆಲಸವನ್ನು ಸಮರ್ಥವಾಗಿ ನಿಭಾಯಿಸುವ ಶಕ್ತಿಯನ್ನು ಹೊಂದಿದ್ದಾಳೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತಾ ಮತ್ತು ಜೀವನೋಪಾಯ ಇಲಾಖೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ -ಸಂಜೀವಿನಿ, ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಮತ್ತು ಗ್ರಾಮೀಣ ಕೈಗಾರಿಕಾ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ತ.ರಾ.ಸು.ರಂಗಮಂದಿರದಲ್ಲಿ ಮಂಗಳವಾರದ ಏರ್ಪಡಿಸಲಾದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಎಲ್ಲಾ ರಂಗಗಳಲ್ಲಿ ಮಹಿಳೆ ಮುಂಚೂಣಿಯಲ್ಲಿದ್ದಾಳೆ ಇದಕ್ಕೆ ಪುರುಷರ ಸಹಕಾರವೂ ಅಷ್ಟೆ ಇರುತ್ತದೆ. “ಸುಸ್ಥಿರ ನಾಳೆಗಾಗಿ ಇಂದು ಲಿಂಗ ಸಮಾನತೆ” ಎಂಬ ಧ್ಯೇಯ ವಾಕ್ಯದೊಂದಿಗೆ ಈ ವರ್ಷ ನಾವು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ. ಮಹಿಳೆಯರು ಮನೆಯಲ್ಲಿ ಇದ್ದು ಕುಟುಂಬವನ್ನು ನಿರ್ವಹಣೆ ಮಾಡುವುದರ ಜೊತೆಗೆ ಹೊರೆಗಿನ ಕೆಲಸವನ್ನು ನಿಭಾಯಿಸುವ ಶಕ್ತಿ ನಮ್ಮ ನಾರಿಮಣಿಯರಲ್ಲಿದೆ. ಮಹಿಳೆಯರ ಶಕ್ತಿ ಏನೆಂದು ತೋರಿಸಿದ್ದೇವೆ, ಮಹಿಳಾ ಮಣಿಗಳು ಮನೆಯಲ್ಲಿ ಇರದಿದ್ದರೆ ಯಾವ ಕೆಲಸವೂ ಸಹ ಪೂರ್ಣವಾಗುವುದಿಲ್ಲ. ಆದ್ದರಿಂದ ಮಹಿಳೆಯರ ಮಹತ್ವ ಪ್ರಮುಖವಾದದು ಎಂದು ತಿಳಿಸಿದರು.

ಮಹಿಳೆಯರನ್ನು ಭೂದೇವಿ, ಕರುಣಾಮಯಿ, ವೀರನಾರಿ ಈ ರೀತಿಯ ಹೆಸರುಗಳಿಂದ ಸ್ತ್ರೀಯರನ್ನು ಗೌರವಿಸಲಾಗುತ್ತದೆ. ಆದರೆ ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ಗಮನ ಕೊಡುತ್ತಿಲ್ಲ. ಹಾಗಾಗಿ ಆರೋಗ್ಯದ ಕಡೆ ಹೆಚ್ಚು ಒತ್ತು ನೀಡಬೇಕು. ನಾವು ಚೆನ್ನಾಗಿದ್ದರೆ ನಮ್ಮ ಕುಟುಂಬವನ್ನು ಚೆನ್ನಾಗಿ ನೋಡಿಕೊಳ್ಳಲು ಸಹಾಯಕಾರಿಯಾಗುತ್ತದೆ. ಮಹಿಳೆಯರೇ ಅನಾರೋಗ್ಯಕ್ಕೆ ತುತ್ತಾದರೆ ನಮ್ಮ ಕುಟುಂವನ್ನು ನೋಡಿಕೊಳ್ಳುವವರು ಯಾರು, ಮಕ್ಕಳನ್ನು ನೋಡಿಕೊಳ್ಳವುದು ಪುರುಷರಿಂದ ಕಷ್ಟಸಾಧ್ಯ ಅದಕ್ಕಾಗಿ ಸದಾ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕೆಂದರು.

 

 

ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ನಂದಿನಿದೇವಿ ಮಾತನಾಡಿ ಜಿಲ್ಲೆಯಲ್ಲಿ ಒಟ್ಟು 7,250 ಸ್ವಸಹಾಯ ಗುಂಪುಗಳು ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ-ಸಂಜೀವಿನಿ ಯೋಜನೆಯಡಿಯಲ್ಲಿ ಇವೆ. 2023ರೊಳಗೆ ಎಲ್ಲಾ ಸ್ವಸಹಾಯ ಗುಂಪುಗಳನ್ನು ಸಂಜೀವಿನಿ ಯೋಜನೆಯಡಿಯಲ್ಲಿ ಸೇರಿಸುವ ಗುರಿ ಹೊಂದಲಾಗಿದೆ. ಸ್ವಸಹಾಯ ಸಂಘಗಳ ಮೂಲಕ ವಿವಿಧ ರೀತಿಯ ತರಬೇತಿಗಳನ್ನು ನೀಡಲಾಗುತ್ತಿದೆ. ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ -ಸಂಜೀವಿನಿ ಯೋಜನೆ ಅಡಿಯಲ್ಲಿ ಮಹಿಳೆಯರ ಆರ್ಥಿಕ ಸ್ವಾಲಂಬನೆಗಾಗಿ ಸಾಕಷ್ಟು ಯೋಜನೆಗಳನ್ನು ರೂಪಿಸಲಾಗಿದ್ದು, ಮಹಿಳೆಯರೆಲ್ಲರೂ ಅದರ ಬಗ್ಗೆ ತಿಳಿದು ಪ್ರಯೋಜನ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಮಹಿಳಾ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಮಹಿಳೆಯರ ಸಾಂಸ್ಕøತಿಕ ಕಾರ್ಯಕ್ರಮಗಳು ಕಣ್ಮನ ಸೆಳೆದವು. ಹಾಗೂ ಸಾಧನೆಗೈದ ರೈತ ಮಹಿಳೆಯರು, ಸ್ವಸಹಾಯ ಗುಂಪುಗಳಿಗೆ, ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ಅಂಗನವಾಡಿ ಕಾರ್ಯಕರ್ತೆಯರಿಗೆ, ಕ್ರೀಡಾ, ಶಿಕ್ಷಣ, ಕಲೆ ಮತ್ತು ಸಾಂಸ್ಕøತಿಕ ಕ್ಷೇತ್ರಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಿಸಲಾಯಿತು.
ಮಹಿಳಾ ಒಕ್ಕೂಟದ ಜಿಲ್ಲಾ ಅಧ್ಯಕ್ಷೆ ಕೊಲ್ಲಿಲಕ್ಷ್ಮಿ, ಹೊಳಲ್ಕೆರೆ ತಾಲ್ಲೂಕು ಅಧ್ಯಕ್ಷರಾದ ಮಂಜುಳ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಮಹಂತೇಶ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪಿ.ಲೋಕೇಶಪ್ಪ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳಾ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೆ.ಎಸ್.ರಾಜನಾಯಕ್ ಸ್ವಾಗತಿಸಿದರು.
ಪ್ರಸಕ್ತ ಸಾಲಿನಲ್ಲಿ ಜಿಲ್ಲಾ ಮಟ್ಟದ ಉತ್ತಮ ಅಂಗನವಾಡಿ ಕಾರ್ಯಕರ್ತೆ ಪ್ರಶಸ್ತಿಗೆ ಆಯ್ಕೆಯಾದ ಅಂಗನವಾಡಿ ಕಾರ್ಯಕರ್ತೆಯರಿಗೆ ಸನ್ಮಾನಿಸಿ ಗೌರವಿಸಲಾಯಿತು. ಚಿತ್ರದುರ್ಗ ತಾಲ್ಲೂಕಿನ ಜಿ.ಆರ್.ಹಳ್ಳಿ ಪಾಲಾಕ್ಷಿ.ಪಿ, ಹುಲ್ಲೇಹಾಳ್ ಟಿ.ವಿನೋದಮ್ಮ, ಚಳ್ಳಕೆರೆ ತಾ; ಕಸ್ತೂರಿ ತಿಮ್ಮೇನಹಳ್ಳಿ ಎನ್.ಈರಮ್ಮ, ಹಿರಿಯೂರು ತಾ; ವೇದಾವತಿ ನಗರದ ಕೆ.ಆಶಾರಾಣಿ, ಹೊಳಲ್ಕೆರೆ ತಾ; ಅರೇಹಳ್ಳಿ ವೈ.ಶಾರದಮ್ಮ, ಹೊಸದುರ್ಗ ತಾ; ಕಾನುಬೇಹಳ್ಳಿ ಸವಿತ.ಕೆ.ಟಿ, ಮೊಳಕಾಲ್ಮುರು ತಾ; ಕುರಾಕಲಹಟ್ಟಿ ಪಿ.ಬಿ.ಜಾಹ್ನವಿ ಇವರಿಗೆ ಸನ್ಮಾನಿಸಲಾಯಿತು.
ಅಸಾಧಾರಣಾ ಸಾಧನೆ ಮಾಡಿ ಜಿಲ್ಲಾ ಮಟ್ಟದ ಪ್ರಶಸ್ತಿ ಪಡೆದ ಮಕ್ಕಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕ್ರೀಡಾ ಕ್ಷೇತ್ರ ಸೈಯಿದಾ ಆಯಿಷಾ ಉಬೇದ್, ಇಂದು.ಪಿ, ನಾವಿನ್ಯತೆಯಲ್ಲಿ ರಶ್ಮಿ.ಬಿ, ಹರ್ಷ ಹೆಚ್.ವೈ, ಶೈಕ್ಷಣಿಕ ಉಮ್ನೆ ಆಸ್ಮಾ, ಮನೋಹರ್.ಸಿ, ಕಲೆ, ಸಾಂಸ್ಕøತಿಕ ಚಿನ್ಮಯಿಸಿರಿ ಪಿ.ಆರ್, ಪ್ರಿಯಾಂಕ.ಆರ್ ಇವರಿಗೆ ಸನ್ಮಾನಿಸಲಾಯಿತು.
ಶಿಶು ಅಭಿವೃದ್ದಿ ಯೋಜನಾಧಿಕಾರಿ ಸುಧಾ ನಿರೂಪಿಸಿದರು. ಜಿಲ್ಲಾ ಅಂಗವಿಕಲರ ಕಲ್ಯಾಣಧಿಕಾರಿ ವೈಶಾಲಿ ಜೆ. ಬಭಾಗವಹಿಸಿದ್ದರು…

[t4b-ticker]

You May Also Like

More From Author

+ There are no comments

Add yours