ಹೈಟೆಕ್ ಜೀವನ ನಡೆಸಲು ಡ್ರಕ್ಸ್ ಮಾರಟ ಪ್ರೇಮಿಗಳ ಬಂಧನ

 

 

 

 

ಬೆಂಗಳೂರು,ಮಾ.9- ಐಷಾರಾಮಿ ಜೀವನ ನಡೆಸಲು ಡ್ರಗ್ಸ್ ಸರಬರಾಜು ಮಾರಾಟ ಮಾಡುತ್ತಿದ್ದ ಪ್ರೇಮಿಗಳನ್ನು ಹುಳಿಮಾವು ಪೊಲೀಸರು ಬಂಧಿಸಿ ಹೆಚ್ಚಿನ ತನಿಖೆಯನ್ನು ಕೈಗೊಂಡಿದ್ದಾರೆ.
ಕೇರಳ ಮೂಲದ ಸಿಗಿಲ್ ವರ್ಗಿಸ್ ಮತ್ತು ವಿಷ್ಣುಪ್ರಿಯ ಬಂಧಿತ ಪ್ರೇಮಿಗಳಾಗಿದ್ದು ಯಾವುದೇ ಉದ್ಯೋಗವಿಲ್ಲದ ಇವರಿಬ್ಬರೂ ಐಷಾರಾಮಿ ಜೀವನಕ್ಕೆ ಡ್ರಗ್ಸ್ ಮಾರಾಟ ಸರಬರಾಜು ಸೇವನೆಯಲ್ಲಿ ತೊಡಗಿರುವುದು ಪತ್ತೆಯಾಗಿದೆ.
ಸಿಗಿಲ್ ವರ್ಗಿಸ್ ಮತ್ತು ವಿಷ್ಟುಪ್ರಿಯ ವಿದ್ಯಾಭ್ಯಾಸಕ್ಕಾಗಿ ಕೇರಳದಿಂದ ನಗರಕ್ಕೆ ಬಂದಿದ್ದು, ಡ್ರಗ್ಸ್ ಸೇವನೆ ಚಟಕ್ಕೆ ಬಿದ್ದಿದ್ದ ಇಬ್ಬರು ಪ್ರೇಮಿಗಳು ಐಷಾರಾಮಿ ಜೀವನ ನಡೆಸಲು ಪೆಡ್ಲಿಂಗ್ ಆರಂಭಿಸಿದ್ದರು.
ಕೇರಳ ಮತ್ತು ತಮಿಳುನಾಡಿನ ಕೊಯಮತ್ತೂರಿನಿಂದ ಡ್ರಗ್ಸ್ ತರಿಸಿಕೊಂಡು ನಗರದ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ಐಟಿ ಬಿಟಿ ಉದ್ಯೋಗಿಗಳಿಗೆ ವಿವಿಧ ಮಾದರಿಯ ಡ್ರಗ್ಸ್ ಮಾರಾಟ ಮಾಡುತ್ತಿದ್ದರು.
ಪೊಲೀಸರಿಗೆ ಈ ದಂಧೆಯ ಅಧಿಕೃತ ಮಾಹಿತಿ ಸಿಕ್ಕಿದ ಹಿನ್ನೆಲೆಯಲ್ಲಿ ದಾಳಿ ನಡೆಸಿ ಬಂಧಿಸಲಾಗಿದೆ.
ಬಂಧಿತ ಆರೋಪಿಗಳಿಂದ ೮ ಕೋಟಿ ರೂ. ಮೌಲ್ಯದ ವಿವಿಧ ರೀತಿಯ ಡ್ರಗ್ಸ್‌ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

 

 

[t4b-ticker]

You May Also Like

More From Author

+ There are no comments

Add yours