ಅಂಗಡಿಗಳಿಗೆ ಭೇಟಿ ನೀಡಿ ಕೋಟ್ಪಾ-2003ರ ಕಾಯ್ದೆಯ ಕಾರ್ಯಾಚರಣೆ 118 ಪ್ರಕರಣ ದಾಖಲು: ರೂ.15,500 ದಂಡ ವಸೂಲಿ

 

 

 

 

ಚಿತ್ರದುರ್ಗ,ಜನವರಿ21:
ಚಿತ್ರದುರ್ಗ ಜಿಲ್ಲೆಯಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್. ರಂಗನಾಥ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣಾಧಿಕಾರಿ ಡಾ.ಎನ್. ಕಾಶಿ ಅವರ ಮಾರ್ಗದರ್ಶನದಲ್ಲಿ ಕೋಟ್ಪಾ-2003ರ ಕಾಯ್ದೆಯ ಕುರಿತು ಜಿಲ್ಲಾಮಟ್ಟದ ತಂಬಾಕು ತನಿಖಾ ತಂಡವು ಚಳ್ಳಕೆರೆ ಮತ್ತು ಹಿರಿಯೂರು ನಗರ ಪ್ರದೇಶಗಳಲ್ಲಿ ತಂಬಾಕು ಉತ್ಪನ್ನಗಳ ಮಾರಾಟಗಾರರ ಅಂಗಡಿಗಳಿಗೆ ಗುರುವಾರ ದಾಳಿ ನಡೆಸಿ 118 ಪ್ರಕರಣಗಳನ್ನು ದಾಖಲಿಸಿ ದಂಡ ವಿಧಿಸಿದೆ.
ತಂಬಾಕು ಮತ್ತು ಕೊರೋನಾ ಕುರಿತು ಸಾರ್ವಜನಿಕರಲ್ಲಿ ಮತ್ತು ಅಂಗಡಿ ಮಾಲೀಕರಿಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡದಂತೆ, ಪಾನ್ ಮಸಾಲ, ತಂಬಾಕು ಜಗಿದು ಉಗಿಯದಂತೆ ತಡೆಗಟ್ಟಲು ಜಾಗೃತಿ ಮೂಡಿಸಲಾಯಿತು.
ಸಂಬಂಧಪಟ್ಟ ಸೆಕ್ಷನ್-4, 6ಎ ಮತ್ತು 6ಬಿ ಬೋರ್ಡ್‍ಗಳನ್ನು ಹಾಕಲು ಸೂಚಿಸಲಾಯಿತು ಮತ್ತು ಸೆಕ್ಷನ್-4 ಅಡಿಯಲ್ಲಿ 110 ಕೇಸುಗಳನ್ನು ದಾಖಲಿಸಿ ರೂ. 14,300 ದಂಡವನ್ನು ಮತ್ತು ಸೆಕ್ಷನ್-6ಎ ಅಡಿಯಲ್ಲಿ 08 ಕೇಸುಗಳನ್ನು ದಾಖಲಿಸಿ ರೂ. 1200 ದಂಡವನ್ನು ವಸೂಲಿ ಮಾಡಲಾಯಿತು.
ತಂಬಾಕು ದಾಳಿಯಲ್ಲಿ ಜಿಲ್ಲಾ ಮಟ್ಟದ ತನಿಖಾ ತಂಡದ ಅಧಿಕಾರಿಗಳಾದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಬಿ.ಎಂ.ಪ್ರಭುದೇವ್, ಚಳ್ಳಕೆರೆ3 ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಬಿ.ತಿಪ್ಪೇಸ್ವಾಮಿ, ಕಿರಿಯ ಆರೋಗ್ಯ ನಿರೀಕ್ಷಕ ಹೆಚ್.ದಾದಾಪೀರ್, ಪೊಲೀಸ್ ಕಾನ್ಸ್‍ಟೇಬಲ್ ವೆಂಕಟೇಶ್, ಅಬಕಾರಿ ಇಲಾಖೆ ಎಸ್‍ಐಇ ಕರಿಬಸಪ್ಪ ಇದ್ದರು.
=======

 

 

[t4b-ticker]

You May Also Like

More From Author

+ There are no comments

Add yours