ಅ.01ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆ

 

ಚಿತ್ರದುರ್ಗ,ಸೆಪ್ಟೆಂಬರ್28:
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ರಾಜ್ಯ ಸರ್ಕಾರಿ ನಿವೃತ್ತ ನೌಕರರ ಜಿಲ್ಲಾ ಸಂಘ, ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಚಿತ್ರದುರ್ಗ ಇವರುಗಳ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್ 01ರಂದು ಬೆಳಿಗ್ಗೆ 11ಕ್ಕೆ ನಗರದ ತರಾಸು ರಂಗಮಂದಿರದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಆಯೋಜಿಸಲಾಗಿದೆ.
ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವರಾದ ಎ.ನಾರಾಯಣಸ್ವಾಮಿ ಘನ ಉಪಸ್ಥಿತರಿದ್ದು, ಹಿರಿಯ ನಾಗರಿಕರಿಗೆ ಸನ್ಮಾನ ಮಾಡುವರು. ಸಾರಿಗೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಉದ್ಘಾಟನೆ ನೆರವೇರಿಸುವರು. ಶಾಸಕರಾದ ಜಿ.ಹೆಚ್.ತಿಪ್ಪಾರೆಡ್ಡಿ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಹೊಳಲ್ಕೆರೆ ಶಾಸಕರು ಹಾಗೂ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾದ ಎಂ.ಚಂದ್ರಪ್ಪ, ಹೊಸದುರ್ಗ ಶಾಸಕರಾದ ಗೂಳಿಹಟ್ಟಿ ಡಿ.ಶೇಖರ್, ಚಳ್ಳಕೆರೆ ಶಾಸಕರಾದ ಟಿ.ರಘುಮೂರ್ತಿ, ಹಿರಿಯೂರು ಶಾಸಕರಾದ ಪೂರ್ಣಿಮಾ ಕೆ.ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯರಾದ ಜಿ.ರಘು ಆಚಾರ್, ಡಾ.ವೈ.ಎ.ನಾರಾಯಣಸ್ವಾಮಿ, ಚಿದಾನಂದ ಎಂ.ಗೌಡ, ರಾಜ್ಯ ಖನಿಜ ನಿಗಮದ ಅಧ್ಯಕ್ಷರಾದ ಎಸ್.ಲಿಂಗಮೂರ್ತಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಬದರೀನಾಥ್, ನಗರಸಭೆ ಅಧ್ಯಕ್ಷೆ ಬಿ.ತಿಪ್ಪಮ್ಮ, ರಾಜ್ಯ ಸರ್ಕಾರಿ ನಿವೃತ್ತ ನೌಕರರ ಜಿಲ್ಲಾ ಸಂಘದ ಅಧ್ಯಕ್ಷರಾದ ವೈ.ಚಂದ್ರಶೇಖರಯ್ಯ ಭಾಗವಹಿಸುವರು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours