ಇಂದಿನಿಂದಲೇ ಪರಿಸರದ ಸಂರಕ್ಷಣೆ ಬಗ್ಗೆ ಕಾಳಜಿ ವಹಿಸುವುದು ಮುಖ್ಯ :ಡಾ.ಪರಶುರಾಮ

 

ವರದಿ : ಚಿಕ್ಕಪ್ಪನಹಳ್ಳಿ ಸೋಮು

ಹೊಸದುರ್ಗ : ಪ್ರಕೃತಿ ಮನುಷ್ಯನ ಜೀವನಕ್ಕೆ ಏನ್ನೆಲ್ಲ ಕೊಟ್ಟಿಲ್ಲ. ಅಂತಹದರಲ್ಲಿ ಮನುಷ್ಯ ತನ್ನ ವೈಯಕ್ತಿಕ ಪ್ರಯೋಜನಕ್ಕಾಗಿ ಪರಿಸರದ ಮೇಲೆ ನಿರಂತರ ದಾಳಿ ನಡೆಸಿದ್ದಾನೆ. ಇಂತ ಪರಿಸ್ಥಿತಿ ಹೀಗೆ ಮುಂದುವರೆದರೆ ನಮ್ಮ ಸರ್ವನಾಶ ನಮ್ಮ ಕಣ್ಣೇದುರೆ ನಡೆಯಲಿದೆ. ಇದು ನಡೆಯಬಾರದೆಂದರೆ ಇಂದಿನಿಂದಲೇ ಪರಿಸರದ ಸಂರಕ್ಷಣೆ ಬಗ್ಗೆ ಕಾಳಜಿ ವಹಿಸುವುದು ಮುಖ್ಯ ಎಂದು ಡಾ.ಪರಶುರಾಮ ಹೇಳಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ತಾಲ್ಲೂಕಿನ ಬಾಗೂರು ವಲಯದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಿದ್ದ ಪರಿಸರ ಮಾಹಿತಿ ಕಾರ್ಯಕ್ರಮದಲ್ಲಿ ಗಿಡ ನೆಟ್ಟು ಮಾತನಾಡಿದರು.

ಪರಿಸರದ ಸಂರಕ್ಷಣೆಗಾಗಿ ನಮ್ಮ ಕೆಲಸ ಕಾರ್ಯಗಳನ್ನು ಬದಿಗೊತ್ತುವ ಅವಶ್ಯಕತೆ ಇಲ್ಲ. ನಮ್ಮ ದೈನಂದಿನ ಜೀವನದಲ್ಲಿ ಕೆಲವೊಂದು ಕ್ರಮಗಳನ್ನು ಅನುಸರಿಸಿದರೆ ಅದೇ ಪರಿಸರ ಉಳಿವಿಗೆ ಸಹಾಯಕವಾಗುತ್ತದೆ. ನಿಸರ್ಗದ ಜೊತೆ ಬೆರೆತು ಬಾಳಿದರೆ ಪರಿಸರದ ಮೇಲೆ ದುಷ್ಪರಿಣಾಮ ಬೀರುವ, ಪರಿಸರದ ಉಳಿವಿಗೆ ಪೂರಕವಾಗುವ ವಿಷಯಗಳ ಬಗ್ಗೆ ನಮ್ಮ ಸಾಮಾನ್ಯ ಜ್ಞಾನ ತಾನಾಗಿಯೇ ಬೆಳೆಯುತ್ತದೆ. ಆದರೆ ಅದು ಅಷ್ಟು ಸುಲಭವಲ್ಲ, ಆಧುನಿಕ ಜಗತ್ತಿನಲ್ಲಿ ತಂತ್ರಜ್ಞಾನದ ಆವಿಷ್ಕರದಿಂದ ಇಂದಿನ ಮಾನವನ ಜೀವನ ಹಾಗೂ ಚಟುವಟಿಕೆಗಳು ಅತ್ಯಂತ ಸಂಕೀರ್ಣವಾಗಿವೆ. ಇದರಿಂದ ಹೆಚ್ಚಿನ ಮನುಷ್ಯರು ಪ್ರಕೃತಿಯಿಂದ ದೂರಾಗಿ ವಿವಿಧ ಅನೈಸರ್ಗಿಕ ಚಟುವಟಿಕೆಗಳಲ್ಲಿ ಕಾಲಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ವಲಯ ಮೇಲ್ವಿಚಾರಕ ಭರತ್ ಕುಮಾರ್ ಮಾತನಾಡಿ ಪರಿಸರ ದಿನಾಚರಣೆಯ ಅಂಗವಾಗಿ ಧರ್ಮಸ್ಥಳ ಸಂಸ್ಥೆ ವತಿಯಿಂದ ಕರ್ನಾಟಕದಾದ್ಯಂತ 1600 ಹೆಚ್ಚು ಕಾರ್ಯಕ್ರಮಗಳು ಜೂನ್ ತಿಂಗಳಲ್ಲಿ ನಡೆಯುತ್ತಿದ್ದು ಕಾಡುಗಳಲ್ಲಿ ಪ್ರಾಣಿ ಪಕ್ಷಿಗಳ ಆಹಾರಕ್ಕಾಗಿ ಹಣ್ಣಿನ ಗಿಡಗಳ ನಾಟಿ ಕಾರ್ಯ ಆಗಿದ್ದು ಮುಂದಿನ ಪೀಳಿಗೆಗೆ ಇಂದಿನ ಯುವ ಜನಾಂಗದ ಅಮೂಲ್ಯ ಕೊಡುಗೆ ಎಂದರೆ ಅದುವೇ ಹಸಿರು ಕ್ರಾಂತಿ ಎನ್ನುವ ಮಾತಿನೊಂದಿಗೆ ಪರಿಸರ ಜಾಗೃತಿ ಬಗ್ಗೆ ಮಾಹಿತಿ ನೀಡಿದರು.

ಇದೇ ವೇಳೆ ಕಾರ್ಯಕ್ರಮದಲ್ಲಿ ಬಾಗೂರು ಗ್ರಾಮ ಪಂಚಾಯಿತಿ ಸದಸ್ಯರಾದ ಸಂಜು ಹೋವಳೆ, ಆಶಾ ಕಾರ್ಯಕರ್ತೆಯರು, ಸೇವಾಪ್ರತಿನಿಧಿಗಳು, ಸ್ವಸಹಾಯ ಸಂಘಗಳ ಸದಸ್ಯರು ಪಾಲ್ಗೊಂಡಿದ್ದರು.

[t4b-ticker]

You May Also Like

More From Author

+ There are no comments

Add yours