ಇಳಿಕೆ-ಏರಿಕೆ ಕೋವಿಡ್ ಹೆಲ್ತ್ ಬುಲೆಟಿನ್: ಜಿಲ್ಲೆಯಲ್ಲಿ 489 ಜನರಿಗೆ ಕೋವಿಡ್ ಸೋಂಕು ದೃಢ: 283 ಮಂದಿ ಬಿಡುಗಡೆ

 

 

 

ಚಿತ್ರದುರ್ಗ:
ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಪಾಸಿಟಿವ್ ವರದಿ ಸಂಬಂಧಿಸಿದಂತೆ ಶುಕ್ರವಾರದ ವರದಿಯಲ್ಲಿ 489 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 27,051 ಕ್ಕೆ ಏರಿಕೆಯಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 251, ಚಳ್ಳಕೆರೆ 95, ಹಿರಿಯೂರು 75, ಹೊಳಲ್ಕೆರೆ 23, ಹೊಸದುರ್ಗ 33, ಮೊಳಕಾಲ್ಮುರು ತಾಲ್ಲೂಕಿನಲ್ಲಿ 12 ಸೇರಿದಂತೆ ಒಟ್ಟು 489 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಶುಕ್ರವಾರ 283 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಶುಕ್ರವಾರ ಒಟ್ಟು 2698 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ವರದಿಯಲ್ಲಿ 489 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 27,051 ಕ್ಕೆ ಏರಿಕೆಯಾಗಿದೆ. ಕೋವಿಡ್‍ನಿಂದ ಇಂದು ಇಬ್ಬರು ಮೃತರಾಗಿದ್ದು ಇದುವರೆಗೆ ಒಟ್ಟು 140 ಜನ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 20,833 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 6,078 ಸಕ್ರಿಯ ಪ್ರಕರಣಗಳು ಇವೆ.
ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 250539 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
ಈವರೆಗೆ 4,76,465 ಜನರ ಮಾದರಿ ಸಂಗ್ರಹಿಸಲಾಗಿದ್ದು, 4,48,295 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 320 ಜನರ ವರದಿ ಬರುವುದು ಬಾಕಿ ಇದೆ. 799 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಂಗನಾಥ್ ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours