ಈರುಳ್ಳಿಗೆ ಬುಡಕೊಳೆ ರೋಗ: ಹಾನಿಯಾದ ಪ್ರದೇಶಕ್ಕೆ ಅಧಿಕಾರಗಳ ಭೇಟಿ .

 

 

ಚಿತ್ರದುರ್ಗ,ಜುಲೈ01:
ಹೊಸದುರ್ಗ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಸುಮಾರು ಸಾವಿರ ಎಕರೆ ಪ್ರದೇಶದಲ್ಲಿ ಈರುಳ್ಳಿ ಬುಡಕೊಳರೋಗ ಹೆಚ್ಚಾಗಿದ್ದು, ಹಾನಿಯಾದ ಪ್ರದೇಶಕ್ಕೆ ಅಧಿಕಾರಿಗಳು ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ಸಲಹೆ ನೀಡಿದರು.
ಹೊಸದುರ್ಗ ತಾಲ್ಲೂಕಿನ ಹೊಸಕುಂದೂರು, ಶ್ರೀರಂಗಪುರ, ಬಾಗೂರು, ಆನಿವಾಳ, ನಾಗೇನಹಳ್ಳಿ ಗ್ರಾಮಗಳು ಸೇರಿದಂತೆ ಸುಮಾರು ಸಾವಿರ ಎಕರೆ ಪ್ರದೇಶದಲ್ಲಿ ಈರುಳ್ಳಿಗೆಬುಡಕೊಳೆ ಕಾಣಿಸಿಕೊಂಡಿರುವ ಹಿನ್ನಲೆಯಲ್ಲಿ ಬಬ್ಬೂರು ಫಾರಂ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರಾದ ಡಾ.ಓಂಕಾರಪ್ಪ, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕರಾದ ಶೋಭಾ ಅವರು ಹಾನಿಯಾದ ಪ್ರದೇಶದಲ್ಲಿ ಭೇಟಿ ಮಾಡಿ ರೈತರಿಗೆ ರೋಗದ ಬಗ್ಗೆ ಮಾಹಿತಿ ನೀಡಿದರು.


ರೋಗ ಉಲ್ಭಣಗೊಳ್ಳದಿರಲು ಮ್ಯಾಂಕೊಜೆಟ್ ಮತ್ತು ಮೆಟಾಲಾಕ್ಸಿಲ್ ಅಥವಾ ಮ್ಯಾಂಕೊಜೆಟ್ ಮತ್ತು ಕಾರ್ಜಿಡಿಜಂ ಸಿಂಪರಣೆ ಮಾಡಲು ಸೂಚಿಸಿದರು. ಈ ಸಂದರ್ಭದಲ್ಲಿ ಗ್ರಾಮಸ್ಥರು ಹಾಜರಿದ್ದರು.

[t4b-ticker]

You May Also Like

More From Author

+ There are no comments

Add yours