ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆ: ವಸತಿ ಶಾಲೆಗಳಿಗೆ “ಎ”ಗ್ರೇಡ್ ಫಲಿತಾಂಶ

 

 

 

 

ಚಿತ್ರದುರ್ಗ,ಆಗಸ್ಟ್24;
‘ಪ್ರತಿಭೆಗೆ ಪುರಸ್ಕಾರ’ ಎಂಬ ಧ್ಯೇಯವಾಕ್ಯದೊಂದಿಗೆ  ಚಿತ್ರದುರ್ಗ ಜಿಲ್ಲೆಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ 19 ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ ಮಾದರಿ ವಸತಿ ಶಾಲೆಗಳಿಂದ 2020-21ನೇ ಸಾಲಿನಲ್ಲಿ ಒಟ್ಟು 888 ವಿದ್ಯಾರ್ಥಿಗಳು ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಗೆ ಹಾಜರಾಗಿದ್ದು, ಎಲ್ಲಾ 888 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ. 100 ರಷ್ಟು ಫಲಿತಾಂಶವನ್ನು ಪಡೆದಿರುತ್ತಾರೆ.
647 ವಿದ್ಯಾರ್ಥಿಗಳು ಅತ್ಯುನ್ನತ ದರ್ಜೆ ಹಾಗೂ 240 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗುವ ಮೂಲಕ ಶೇ.99.88 ರಷ್ಟು (ಒಟ್ಟು 887) ವಿದ್ಯಾರ್ಥಿಗಳು ಅತ್ಯುನ್ನತ ಹಾಗೂ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ.
395 ವಿದ್ಯಾರ್ಥಿಗಳು ಎ+ ಶ್ರೇಣಿ, 387 ವಿದ್ಯಾರ್ಥಿಗಳು ಎ ಶ್ರೇಣಿ, 104 ವಿದ್ಯಾರ್ಥಿಗಳು ಬಿ ಶ್ರೇಣಿ ಹಾಗೂ ಒಬ್ಬ ವಿದ್ಯಾರ್ಥಿ ಸಿ ಶ್ರೇಣಿ ಪಡೆದಿರುತ್ತಾರೆ. ಸಾರ್ವಜನಿಕ ಶಿಕ್ಷಣ ಇಲಾಖೆಯ ಫಲಿತಾಂಶ ವಿಶ್ಲೇಷಣೆಯ ಕಿuಚಿಟiಣಥಿ Weighಣಚಿge Peಡಿಛಿeಟಿಣಚಿgeನಲ್ಲಿ ಚಿತ್ರದುರ್ಗ ಜಿಲ್ಲೆಯ ಎಲ್ಲಾ 19 ವಸತಿ ಶಾಲೆಗಳು ಎ ಗ್ರೇಡ್ ಪಡೆದಿರುವುದು ಹೆಮ್ಮೆಯ ಸಾಧನೆಯಾಗಿರುತ್ತದೆ.
ಹೊಸದುರ್ಗ ತಾಲ್ಲೂಕಿನ ನರಗುಂದದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ (ಪ.ಜಾತಿ-392) ವಿದ್ಯಾರ್ಥಿನಿಯಾದ ವಿ. ಸುಷ್ಮಾ ರವರು 623 (99.68%) ಅಂಕಗಳನ್ನು ಪಡೆಯುವ ಮೂಲಕ ಚಿತ್ರದುರ್ಗ ಜಿಲ್ಲೆಯ ವಸತಿ ಶಾಲೆಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಲ್ಲಿ ಮೊದಲ ಸ್ಥಾನವನ್ನು ಪಡೆಯುವ ಮೂಲಕ  ವಸತಿ ಶಾಲೆಗಳ  ಕೀರ್ತಿಯನ್ನು ಹೆಚ್ಚಿಸಿರುತ್ತಾರೆ.
ಒಟ್ಟು 57 ವಿದ್ಯಾರ್ಥಿಗಳು 600ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ್ದು, ಪ್ರಥಮ ಭಾಷೆ ಕನ್ನಡ ಭಾಷೆಯಲ್ಲಿ 63 ವಿದ್ಯಾರ್ಥಿಗಳು 125ಕ್ಕೆ 125 ಅಂಕಗಳನ್ನು ಪಡೆದಿರುತ್ತಾರೆ. ದ್ವಿತೀಯ ಭಾಷೆ ಇಂಗ್ಲೀಷ್‍ನಲ್ಲಿ 121 ವಿದ್ಯಾರ್ಥಿಗಳು, ತೃತೀಯ ಭಾಷೆ ಹಿಂದಿಯಲ್ಲಿ 88 ವಿದ್ಯಾರ್ಥಿಗಳು, ಗಣಿತ ವಿಷಯದಲ್ಲಿ 19 ವಿದ್ಯಾರ್ಥಿಗಳು, ವಿಜ್ಞಾನ ವಿಷಯದಲ್ಲಿ 18 ವಿದ್ಯಾರ್ಥಿಗಳು ಹಾಗೂ ಸಮಾಜ ವಿಜ್ಞಾನ ವಿಷಯದಲ್ಲಿ 08 ವಿದ್ಯಾರ್ಥಿಗಳು 100ಕ್ಕೆ 100 ಅಂಕಗಳನ್ನು ಪಡೆದಿರುತ್ತಾರೆ.
ಸಾಮಾಜಿಕ ಗುಂಪುವಾರು ಫಲಿತಾಂಶದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಒಟ್ಟು 292 ವಿದ್ಯಾರ್ಥಿಗಳಲ್ಲಿ 150 ಎ+ ಶ್ರೇಣಿ, 122 ಎ ಶ್ರೇಣಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಒಟ್ಟು 240 ವಿದ್ಯಾರ್ಥಿಗಳಲ್ಲಿ 66 ಎ+ ಶ್ರೇಣಿ, 123 ಎ ಶ್ರೇಣಿ ಹಾಗೂ ಇತರ ಹಿಂದುಳಿದ ವರ್ಗಗಳಿಗೆ ಸೇರಿದ ಒಟ್ಟು 356 ವಿದ್ಯಾರ್ಥಿಗಳಲ್ಲಿ 179 ಎ+ ಶ್ರೇಣಿ, 143 ಎ ಶ್ರೇಣಿಗಳಲ್ಲಿ ಉತ್ತೀಣರಾಗಿರುತ್ತಾರೆ.
ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಹಿಂದುಳಿದಿರುವ ಗ್ರಾಮೀಣ ಪ್ರದೇಶದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಇಂಗ್ಲೀಷ್ ಮಾಧ್ಯಮದಲ್ಲಿ ಗುಣಾತ್ಮಕ ಶಿಕ್ಷಣವನ್ನು ನೀಡಿ ಉನ್ನತ ವ್ಯಾಸಂಗಕ್ಕೆ ಅನುಕೂಲ ಮಾಡಿಕೊಡುವ ಮೂಲಕ ಸಾಮಾಜಿಕ ಸಮಾನತೆ ಸಾಧಿಸುವ ಉದ್ದೇಶದಿಂದ ಸ್ಥಾಪಿಸಲಾಗಿರುವ ಈ ವಸತಿ ಶಾಲೆಗಳು ಸತತವಾಗಿ ಉತ್ಕøಷ್ಟ ಫಲಿತಾಂಶ ನೀಡುವ ಮೂಲಕ ಸರ್ಕಾರದ ಘನ ಉದ್ದೇಶವನ್ನು ಈಡೇರಿಸಿವೆ.

 

 

ಕೋವಿಡ್-19 ಸಾಂಕ್ರಾಮಿಕದ ಸಂದರ್ಭದಲ್ಲೂ ಸತತ ಪರಿಶ್ರಮದಿಂದ ಉತ್ಕøಷ್ಟ ಫಲಿತಾಂಶ ನೀಡಿದ ವಿದ್ಯಾರ್ಥಿಗಳನ್ನು ಮತ್ತು ಇದಕ್ಕಾಗಿ ಶ್ರಮಿಸಿದ ಎಲ್ಲಾ ವಸತಿ ಶಾಲೆಗಳ ಪ್ರಾಂಶುಪಾಲರು, ಬೋಧಕ ಸಿಬ್ಬಂದಿಗಳು ಮತ್ತು ಬೋಧಕೇತರ ಸಿಬ್ಬಂದಿಗಳನ್ನು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಹೃತ್ಪೂರ್ವಕವಾಗಿ ಅಭಿನಂದಿಸಿದ್ದಾರೆ.
ಸರ್ಕಾರಿ ವಸತಿ ಶಾಲೆಗಳಲ್ಲಿ ನುರಿತ ಬೋಧಕ ಸಿಬ್ಬಂದಿ ವರ್ಗ, ಸುಸಜ್ಜಿತ ಕಟ್ಟಡ, ಕಲಿಕೆಗೆ ಪ್ರೇರೇಪಿಸುವ ಪ್ರಶಾಂತ ವಾತಾವರಣ, ಉಚಿತ ಊಟ ವಸತಿ, ಉಚಿತ ಪಠ್ಯ ಪುಸ್ತಕ- ಲೇಖನ ಸಾಮಾಗ್ರಿ-ಸಮವಸ್ತ್ರ, ವಿಜ್ಞಾನ ಪ್ರಯೋಗಾಲಯ, ಕಂಪ್ಯೂಟರ್ ಶಿಕ್ಷಣ, ಸಂಗೀತ ಶಿಕ್ಷಣ, ಗ್ರಂಥಾಲಯ, ವಿಶಾಲವಾದ ಆಟದ ಮೈದಾನ ಮುಂತಾದ ಸೌಲಭ್ಯಗಳೊಂದಿಗೆ ಗುಣಮಟ್ಟದ ಆಂಗ್ಲ ಮಾಧ್ಯಮ ಶಿಕ್ಷಣ ಒದಗಿಸುತ್ತಿದ್ದು, ಪೋಷಕರು ಖಾಸಗಿ ಶಾಲೆಗಳ ವ್ಯಾಮೋಹಕ್ಕೆ ಒಳಗಾಗದೇ ವಸತಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ದಾಖಲಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours