ಎಸ್‍ಸಿಪಿ, ಟಿಎಸ್‍ಪಿ ಅನುದಾನ ಸಮರ್ಪಕ ಬಳಕೆ ಮಾಡಿ ಶೇ.100ರಷ್ಟು ಪ್ರಗತಿ ಸಾಧಿಸಿ : ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ

 

ಚಿತ್ರದುರ್ಗ,ಜುಲೈ30:
ಪರಿಶಿಷ್ಟ ಜಾತಿಯ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಪಂಗಡದವರಿಗೆ ಮೀಸಲಿರಿಸಲಾದ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು ಶೇ.100ರಷ್ಟು ಪ್ರಗತಿ ಸಾಧಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ 2021-22ನೇ ಸಾಲಿನ ಜೂನ್ ಮಾಹೆಯ ಅಂತ್ಯಕ್ಕೆ ಎಸ್‍ಸಿಪಿ ಮತ್ತು ಟಿಎಸ್‍ಪಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಎಸ್‍ಸಿಪಿ ಮತ್ತು ಟಿಎಸ್‍ಪಿ ಯೋಜನೆಯಲ್ಲಿ ಹಂಚಿಕೆಯಾದ ಅನುದಾನವನ್ನು ಆಯಾ ಇಲಾಖೆಗೆ ಸಂಬಂಧಪಟ್ಟಂತಹ ಅಧಿಕಾರಿಗಳು ನಿಗದಿಪಡಿಸಿದ ಕಾಲಮಿತಿ ಒಳಗಡೆ ಅನುದಾನವನ್ನು ಸೂಕ್ತ ರೀತಿಯಲ್ಲಿ ಬಳಸಿಕೊಂಡು ನಿರ್ದಿಷ್ಟ ಗುರಿ ಸಾಧಿಸಬೇಕು ಎಂದು ತಾಕೀತು  ತಿಳಿಸಿದರು.
ಎಸ್‍ಸಿಪಿ, ಟಿಎಸ್‍ಪಿ ಯೋಜನೆಯ ಕಾಮಗಾರಿಗಳನ್ನು ವಿವಿಧ ಇಲಾಖೆಯ ಅಧಿಕಾರಿಗಳು ಕಟ್ಟುನಿಟ್ಟಾಗಿ ಅನುಷ್ಠಾನ ಮಾಡಬೇಕು. ಬಿಡುಗಡೆಯಾದ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿ, ಜನರಿಗೆ ತಲುಪಿಸಬೇಕು. ಯಾವುದೇ ಕಾರಣಕ್ಕೂ ಕಾಮಗಾರಿ ಅನುಷ್ಠಾನದಲ್ಲಿ ವಿಳಂಬ ಮಾಡಬಾರದು ಎಂದು ತಿಳಿಸಿದರು.
ಹೆಚ್ಚಿನ ದಾಳಿ ನಡೆಸಿ: ಹೋಟೆಲ್, ಮಂಡಕ್ಕಿ ಭಟ್ಟಿ, ಇಟ್ಟಿಗೆ ಭಟ್ಟಿ ಸೇರಿದಂತೆ ಜಿಲ್ಲೆಯ ವಿವಿಧೆಡೆಗಳಲ್ಲಿ ಕೊರೊನಾ ಹಿನ್ನಲೆಯಲ್ಲಿ ಸಾಕಷ್ಟು ಬಾಲಕಾರ್ಮಿಕರು ಕೆಲಸ ಮಾಡುತ್ತಿದ್ದು, ಇಂತಹ ಕಡೆ ಹೆಚ್ಚಿನ ಸಂಖ್ಯೆಯಲ್ಲಿ ದಾಳಿ ನಡೆಸಿ ಬಾಲಕಾರ್ಮಿಕ ಪದ್ಧತಿ ತಡೆಯುವಂತೆ ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ ಕಾರ್ಮಿಕ ಅಧಿಕಾರಿಗಳಿಗೆ ಸೂಚಿಸಿದರು.
ಬಾಲಕಾರ್ಮಿಕ ಪದ್ಧತಿ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯ ವಿವಿಧೆಡೆಗಳಲ್ಲಿ ನಿರಂತರವಾಗಿ ದಾಳಿ ನಡೆಸಿ, ಅಂತಹ ಮಕ್ಕಳಿಗೆ ಪುನರ್ವಸತಿ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ಕಾರ್ಮಿಕ ಅಧಿಕಾರಿ ಮಾಹಿತಿ ನೀಡಿದರು.
ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಮಮತಾ ಮಾತನಾಡಿ, ಅಕ್ಷರ ದಾಸೋಹ ಹೊರತು ಪಡಿಸಿ ಕೃಷಿ ಇಲಾಖೆ, ತೋಟಗಾರಿಕೆ, ರೇಷ್ಮೆ, ವಸತಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಎಸ್‍ಸಿಪಿ, ಟಿಎಸ್‍ಪಿ ಯೋಜನೆಯಲ್ಲಿ ಹಂಚಿಕೆಯಾದ ಅನುದಾನವನ್ನು ಪೂರ್ಣವಾಗಿ ಬಳಸಿಕೊಂಡು ಶೇ.100 ರಷ್ಟು ಪ್ರಗತಿ ಸಾಧಿಸಿವೆ ಎಂದು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಮಮತಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಜಾನಾಯ್ಕ್, ರೇಷ್ಮೆ ಇಲಾಖೆಯ ಉಪನಿರ್ದೇಶಕ ಬಿ.ಎಲ್.ಕೃಷ್ಣಪ್ಪ, ತೋಟಗಾರಿಕೆ ಉಪನಿರ್ದೇಶಕಿ ಸವಿತಾ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

[t4b-ticker]

You May Also Like

More From Author

+ There are no comments

Add yours