ಒಂದೇ ದಿನ ಕೋವಿಡ್ ಪಾಸಿಟಿವ್ ಎಷ್ಟು ಗೊತ್ತೆ. ಮತ್ತೆ ಆತಂಕದತ್ತ ರಾಜ್ಯ

 

ರಾಜ್ಯದಲ್ಲಿ ಇಂದು ಕೂಡ ಕೊರೋನಾ ದಿಢೀರ್ ಏರಿಕೆ ಕಂಡಿದೆ. ಜಿಲ್ಲೆಗಳಲ್ಲಿ ಕೂಡ ಕೊರೋನಾ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳೂ ಕೂಡ ಹೆಚ್ಚಾಗಿವೆ.

ಇಂದು ಒಂದೇ ದಿನ 707 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 252 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಮೂವರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ 8223 ಸಕ್ರಿಯ ಪ್ರಕರಣಗಳು ಇವೆ. ಪಾಸಿಟಿವಿಟಿ ದರ ಶೇಕಡ 0.61 ರಷ್ಟು ಇದೆ.

ಒಟ್ಟು ಪ್ರಕರಣಗಳ ಸಂಖ್ಯೆ 30,06,505 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 38,327 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 29,59,926 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ರಾಜಧಾನಿ ಬೆಂಗಳೂರಿನಲ್ಲಿ ಕೂಡ ಕೊರೋನಾ ಸ್ಪೋಟವಾಗಿದೆ. ಇವತ್ತು ಒಂದು ದಿನ 565 ಜನರಿಗೆ ಸೋಂಕು ತಗುಲಿದ್ದು, ಮೂವರು ಮೃತಪಟ್ಟಿದ್ದಾರೆ. 104 ಜನ ಬಿಡುಗಡೆಯಾಗಿದ್ದು, 6846 ಸಕ್ರಿಯ ಪ್ರಕರಣಗಳಿವೆ.

ಬಾಗಲಕೋಟೆ, ಬೀದರ್, ಚಿಕ್ಕಬಳ್ಳಾಪುರ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ರಾಮನಗರ ಜಿಲ್ಲೆಗಳಲ್ಲಿ ಇಂದು ಯಾವುದೇ ಪ್ರಕರಣ ವರದಿಯಾಗಿಲ್ಲ.

ಬೆಂಗಳೂರು ನಗರ 565, ದಕ್ಷಿಣಕನ್ನಡ 11, ಹಾಸನ 17, ಕೊಡಗು 12, ಮೈಸೂರು 16, ಉಡುಪಿ 19 ಹೊಸ ಪ್ರಕರಣ ವರದಿಯಾಗಿವೆ. ಬೆಂಗಳೂರು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಸಾವಿನ ವರದಿಯಾಗಿಲ್ಲ.

[t4b-ticker]

You May Also Like

More From Author

+ There are no comments

Add yours