ಕರ್ನಾಟಕ ಸಂಗೀತ ಅಕಾಡಮಿಯಿಂದ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ.

 

 

 

 

ಚಿತ್ರದುರ್ಗ,ಆಗಸ್ಟ್17:
ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು 2021-22ನೇ ಸಾಲಿನ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 17 ಕೊನೆಯ ದಿನವಾಗಿದೆ.
ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ನೃತ್ಯ, ಸುಗಮ ಸಂಗೀತ, ಕಥಾಕೀರ್ತನ ಮತ್ತು ಗಮಕ ಈ ಆರು ಕಲಾಕ್ಷೇತ್ರದಲ್ಲಿ ಅಭ್ಯಾಸ ಮಾಡುತ್ತಿರುವ 16 ರಿಂದ 24 ವರ್ಷ ವಯೋಮಾನದ ಒಳಗಿರುವ ಅಭ್ಯರ್ಥಿಗಳು ಮಾತ್ರ 2021-22ನೇ ಸಾಲಿನ ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸಲು ಆರ್ಹರಾಗಿರುತ್ತಾರೆ.
ಸಂದರ್ಶದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.10,000/- ಗಳನ್ನು ಶಿಷ್ಯವೇತನವಾಗಿ ನೀಡಲಾಗುವುದು. ಒಬ್ಬ ವಿದ್ಯಾರ್ಥಿ ಒಮ್ಮೆ ಮಾತ್ರ ಶಿಷ್ಯವೇತನವನ್ನು ಪಡೆಯಲು ಆರ್ಹರಾಗಿರುತ್ತಾರೆ.

 

 

ಅರ್ಜಿ ಪಡೆಯುವ ವಿಧಾನ: ಅಕಾಡೆಮಿಯ ಕಚೇರಿಯ ವೇಳೆಯಲ್ಲಿ ಬೆಳಿಗ್ಗೆ 10ರಿಂದ ಸಂಜೆ 5.30ರ ವರೆಗೆ ಉಚಿತವಾಗಿ ಪಡೆಯಬಹುದು. ಅಕಾಡೆಮಿಯ ಅಂತರ್ಜಾಲತಾಣ https://sangeetanrityaacademy.karnataka.gov.in   ಮೂಲಕ ಪಡೆದು ಸಲ್ಲಿಸಬಹುದು. ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಹೆಸರಿನ ಫೇಸ್‍ಬುಕ್ ಪುಟದಲ್ಲಿ ಅರ್ಜಿಗಳನ್ನು ಪಡೆಯಬಹುದಾಗಿದೆ. ಬೇರೆ ಬೇರೆ ಜಿಲ್ಲೆಯ ಅಭ್ಯರ್ಥಿಗಳು ಆಯಾ ಜಿಲ್ಲೆಯ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಉಚಿತವಾಗಿ ಅರ್ಜಿಗಳನನು ಪಡೆಯಬಹುದು. ಅಂಚೆ ಮೂಲಕ ಅರ್ಜಿ ಮತ್ತು ಪಠ್ಯಕ್ರಮ ಪಡೆಯಲಿಚ್ಚಿಸುವವರು ರೂ.10/-(ರೂಪಾಯಿ ಹತ್ತುಗಳು ಮಾತ್ರ) ಸ್ಟಾಂಪ್ ಹಚ್ಚಿದ ಸ್ವವಿಳಾಸವುಳ್ಳ ಲಕೋಟೆಯನ್ನು ರಿಜಿಸ್ಟ್ರಾರ್, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ ರಸ್ತೆ, ಬೆಂಗಳೂರು-560002 ಇಲ್ಲಿಗೆ ಕಳುಹಿಸಿಕೊಡಬೇಕು.
ಭರ್ತಿ ಮಾಡಿದ ಅರ್ಜಿಗಳನ್ನು ಸೆಪ್ಟೆಂಬರ್ 17ರೊಳಗಾಗಿ ಸಲ್ಲಿಸಬೇಕು. ಕೊನೆಯ ದಿನದ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಎನ್. ನಮ್ರತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours