ಕಾರ್ಯನಿರತ ಪತ್ರಕರ್ತರ ಸಂಘ: ಅರ್ಹ ಮತದಾರರ ಪಟ್ಟಿ ಪೂರ್ವಭಾವಿ ಪ್ರಕಟಣೆ

 

 

 

 

ಚಿತ್ರದುರ್ಗ,ಫೆಬ್ರವರಿ07:
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2022-2025ನೇ ಸಾಲಿನ ರಾಜ್ಯ ಮತ್ತು ಜಿಲ್ಲಾ ಕಾರ್ಯಕಾರಿ ಮಂಡಳಿ ಚುನಾವಣೆಯನ್ನು ಘೋಷಣೆ ಮಾಡಲಾಗಿದ್ದು, ಚಿತ್ರದುರ್ಗ ನಗರದ ಪತ್ರಕರ್ತರ ಭವನದಲ್ಲಿ ಸೋಮವಾರ ಅರ್ಹ ಮತದಾರರ ಪಟ್ಟಿ ಪೂರ್ವಭಾವಿ ಪ್ರಕಟಣೆ ಮಾಡಲಾಗಿದೆ.
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾ ವಾರ್ತಾಧಿಕಾರಿ ಬಿ.ಧನಂಜಯ ಅವರು ಅರ್ಹ ಮತದಾರರ ಪಟ್ಟಿಯನ್ನು ಪ್ರಚುರ ಪಡಿಸಿ ಮಾತನಾಡಿ, ರಾಜ್ಯ ಮತ್ತು ಜಿಲ್ಲಾ ಕಾರ್ಯಕಾರಿ ಮಂಡಳಿಗೆ ಚುನಾವಣೆಯನ್ನು ಘೋಷಣೆ ಮಾಡಿ ವೇಳಾಪಟ್ಟಿಯನ್ನು ಪ್ರಕಟಮಾಡಲಾಗಿದ್ದು, ಚುನಾವಣಾಧಿಕಾರಿಗಳ ಕಚೇರಿ ವೇಳೆ ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ರವರೆಗೆ ಕಾರ್ಯನಿರ್ವಹಿಸಲಿದೆ ಎಂದರು.
ಫೆ.09 ಮತದಾರರ ಪಟ್ಟಿಯಲ್ಲಿನ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಫೆ.11 ಮಧ್ಯಾಹ್ನ 12ಕ್ಕೆ ಅಂತಿಮ ಮತದಾರರ ಪಟ್ಟಿ ಪ್ರಕಟಣೆ, ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ.  ಫೆ.14ರಂದು ಮಧ್ಯಾಹ್ನ 3 ಗಂಟೆವರೆಗೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ. ಫೆ.16 ಮಧ್ಯಾಹ್ನ 1 ಗಂಟೆಯ ನಂತರ ನಾಮಪತ್ರಗಳ ಪರಿಶೀಲನೆ ಹಾಗೂ ಕ್ರಮಬದ್ಧ ಅಭ್ಯರ್ಥಿಗಳ ಪಟ್ಟಿ ಪ್ರಕಟಣೆ ಮಾಡಲಾಗುವುದು. ಫೆ.19ರಂದು ಮಧ್ಯಾಹ್ನ 1 ಗಂಟೆಯೊಳಗೆ ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಮಧ್ಯಾಹ್ನ 2 ಗಂಟೆಯ ನಂತರ ಅರ್ಹ ಅಭ್ಯರ್ಥಿಗಳ ಪಟ್ಟಿ ಪ್ರಕಟಣೆ ಮಾಡಲಾಗುವುದು. ಫೆ.27ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ಅಗತ್ಯ ಬಿದ್ದಲ್ಲಿ ಚುನಾವಣೆ ನಡೆಯಲಿದೆ.
ಫೆ.27ರಂದು ಮಧ್ಯಾಹ್ನ 3 ಗಂಟೆಯ ನಂತರ ಮತಗಳ ಎಣಿಕೆ, ಫಲಿತಾಂಶ ಪ್ರಕಟವಾಗಲಿದೆ. ಫೆ.28ರಂದು ಸೋಮವಾರ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದರು.

 

 

[t4b-ticker]

You May Also Like

More From Author

+ There are no comments

Add yours