ಕೇಂದ್ರ ಸರ್ಕಾರಿ ನೌಕರರ ಮತ್ತು ಪಿಂಚಣಿದಾರರ ತುಟ್ಟಿಭತ್ಯೆ ಹೆಚ್ಚಳ.

 

ನವದೆಹಲಿ: ಕೇಂದ್ರ ಸರ್ಕಾರದ ನೌಕರರು ಮತ್ತು ಪಿಂಚಣಿದಾರರ ತುಟ್ಟಿಭತ್ಯೆ  ಹೆಚ್ಚಿಸಿರುವುದಾಗಿ ಕೇಂದ್ರ ಸರ್ಕಾರ ಬುಧವಾರ ಘೋಷಣೆ ಮಾಡಿದೆ.

ತುಟ್ಟಿಭತ್ಯೆ ಶೇ 17ರಿಂದ ಶೇ.28ಕ್ಕೆ ಹೆಚ್ಚಿಸಿರುವುದಾಗಿ ಕೇಂದ್ರ ಸಚಿವ ಅನುರಾಗ್‌ ಠಾಕೂರ್‌ ತಿಳಿಸಿದ್ದಾರೆ.

ಇದೇ  2021ರ ಜುಲೈ 1ರಿಂದಲೇ ತುಟ್ಟಿಭತ್ಯೆ ಹೆಚ್ಚಳ ಅನ್ವಯವಾಗಲಿದೆ. ಕೇಂದ್ರ ಸಚಿವ ಸಂಪುಟದಲ್ಲಿ ಈ ಬಗ್ಗೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.

ಕೇಂದ್ರ ಸರ್ಕಾರದ ನೌಕರರಿಗೆ ತುಟ್ಟಿಭತ್ಯೆ ಮತ್ತು ಪಿಂಚಣಿದಾರರ ತುಟ್ಟಿಭತ್ಯೆ ಪರಿಹಾರವನ್ನು 2021 ಜುಲೈ 1ರಿಂದ ಜಾರಿಗೊಳಿಸುವಂತೆ ಶೇ. 28ಕ್ಕೆ ಹೆಚ್ಚಿಸಲಾಗಿದೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರಕ್ಕೆ ಸುಮಾರು  ₹  34,400 ಕೋಟಿ ವೆಚ್ಚ ತಗುಲಿದೆ. ಇದರಿಂದ ಕೇಂದ್ರ ಸರ್ಕಾರದ 48,34,000 ನೌಕರರು ಹಾಗೂ 65,26,000 ಪಿಂಚಣಿದಾರರು ಪ್ರಯೋಜನ ಪಡೆಯಲಿದ್ದಾರೆ ಎಂದು ವಾರ್ತಾ ಮತ್ತು ಪ್ರಚಾರ ಖಾತೆ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours