ಕೋವಿಡ್ ಆರ್ಭಟಕ್ಕೆ ಬ್ರೇಕ್ ಬಿಳತ್ತಿಲ್ಲ:ಜಿಲ್ಲೆಯಲ್ಲಿ 710 ಜನರಿಗೆ ಕೋವಿಡ್ ಸೋಂಕು ದೃಢ: 322 ಮಂದಿ ಬಿಡುಗಡೆ.

 

ಚಿತ್ರದುರ್ಗ,ಮೇ.27:
ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಗುರುವಾರದ ವರದಿಯಲ್ಲಿ 710 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 26,562 ಕ್ಕೆ ಏರಿಕೆಯಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 275, ಚಳ್ಳಕೆರೆ 74, ಹಿರಿಯೂರು 110, ಹೊಳಲ್ಕೆರೆ 62, ಹೊಸದುರ್ಗ 118, ಮೊಳಕಾಲ್ಮುರು ತಾಲ್ಲೂಕಿನಲ್ಲಿ 71 ಸೇರಿದಂತೆ ಒಟ್ಟು 710 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಗುರುವಾರ 322 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಗುರುವಾರ ಒಟ್ಟು 2557 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ವರದಿಯಲ್ಲಿ 710 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 26,562 ಕ್ಕೆ ಏರಿಕೆಯಾಗಿದೆ. ಕೋವಿಡ್‍ನಿಂದ ಇಂದು ಮೂವರು ಮೃತರಾಗಿದ್ದು ಇದುವರೆಗೆ ಒಟ್ಟು 138 ಜನ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 20,550 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 5,874 ಸಕ್ರಿಯ ಪ್ರಕರಣಗಳು ಇವೆ.
ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 241203 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
ಈವರೆಗೆ 4,73,767 ಜನರ ಮಾದರಿ ಸಂಗ್ರಹಿಸಲಾಗಿದ್ದು, 4,46,376 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 36 ಜನರ ವರದಿ ಬರುವುದು ಬಾಕಿ ಇದೆ. 793 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಂಗನಾಥ್ ತಿಳಿಸಿದ್ದಾರೆ.
=======

[t4b-ticker]

You May Also Like

More From Author

+ There are no comments

Add yours