ಕೋವಿಡ್ ಓಟಕ್ಕೆ ಫುಲ್ ಬ್ರೇಕ್ , ಜಿಲ್ಲೆಯಲ್ಲಿ 196 ಜನರಿಗೆ ಕೋವಿಡ್ ಸೋಂಕು ದೃಢ: 852 ಮಂದಿ ಬಿಡುಗಡೆ…

 

[WD_Button id=529]    [WD_Button id=528]

ಚಿತ್ರದುರ್ಗ:
ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಮಂಗಳವಾರದ ಹೆಲ್ತ್ ಬುಲೆಟಿನ್ ವರದಿಯಲ್ಲಿ 296 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 32,751ಕ್ಕೆ ಏರಿಕೆಯಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 53, ಚಳ್ಳಕೆರೆ 45, ಹಿರಿಯೂರು 38, ಹೊಳಲ್ಕೆರೆ 25, ಹೊಸದುರ್ಗ 26, ಮೊಳಕಾಲ್ಮುರು ತಾಲ್ಲೂಕಿನ 9 ಪ್ರಕರಣಗಳು ಸೇರಿದಂತೆ ಒಟ್ಟು 196 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಮಂಗಳವಾರ 852 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಮಂಗಳವಾರ ಒಟ್ಟು 3077 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ವರದಿಯಲ್ಲಿ 196 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 32,751ಕ್ಕೆ ಏರಿಕೆಯಾಗಿದೆ. ಒಟ್ಟು 157 ಜನ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 26,516 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 6,078 ಸಕ್ರಿಯ ಪ್ರಕರಣಗಳು ಇವೆ.
ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 3,78,142 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.

ಈವರೆಗೆ 5,04,827 ಜನರ ಮಾದರಿ ಸಂಗ್ರಹಿಸಲಾಗಿದ್ದು, 4,70,411 ಜನರ ವರದಿ ನೆಗೆಟೀವ್ ಬಂದಿದೆ. ಉಳಿದ 825 ಜನರ ವರದಿ ಬರುವುದು ಬಾಕಿ ಇದೆ. 840 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಂಗನಾಥ್ ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours