ಕೋವಿಡ್ ಓಟಕ್ಕೆ ಬ್ರೇಕ್ ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ ಮೂರು ಮಂದಿ ಬಲಿ, ಸೋಂಕಿತರ ಸಾವಿನ ಸಂಖ್ಯೆ165 ಏರಿಕೆ….

 

ಚಿತ್ರದುರ್ಗ:ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಶನಿವಾರದ ಹೆಲ್ತ್ ಬುಲೆಟಿನ್ ವರದಿಯಲ್ಲಿ  156 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 33,579ಕ್ಕೆ ಏರಿಕೆಯಾಗಿದೆ.

ಚಿತ್ರದುರ್ಗ ತಾಲ್ಲೂಕಿನಲ್ಲಿ 38, ಚಳ್ಳಕೆರೆ 29, ಹಿರಿಯೂರು 18, ಹೊಳಲ್ಕೆರೆ 37, ಹೊಸದುರ್ಗ 30, ಮೊಳಕಾಲ್ಮುರು ತಾಲ್ಲೂಕಿನ 4 ಪ್ರಕರಣಗಳು ಸೇರಿದಂತೆ ಒಟ್ಟು 123 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಶನಿವಾರ 678 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಶುಕ್ರವಾರ ಒಟ್ಟು 3420 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ.  ವರದಿಯಲ್ಲಿ 123 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 33,423ಕ್ಕೆ ಏರಿಕೆಯಾಗಿದೆ. ಕೋವಿಡ್‍ನಿಂದ ಇಂದು ಮೂರು ಮಂದಿ ಮೃತರಾಗಿದ್ದು ಇದುವರೆಗೆ ಒಟ್ಟು 165 ಜನ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 29,091 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 4,323 ಸಕ್ರಿಯ ಪ್ರಕರಣಗಳು ಇವೆ.
ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 4,23,067 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
ಈವರೆಗೆ 5,16,954 ಜನರ ಮಾದರಿ ಸಂಗ್ರಹಿಸಲಾಗಿದ್ದು, 4,81,837 ಜನರ ವರದಿ ನೆಗೆಟೀವ್ ಬಂದಿದೆ. ಉಳಿದ 684 ಜನರ ವರದಿ ಬರುವುದು ಬಾಕಿ ಇದೆ. 854 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಂಗನಾಥ್ ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours