ಚಿತ್ರದುರ್ಗ:ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್ಗೆ ಸಂಬಂಧಿಸಿದಂತೆ ಗುರುವಾರದ ಹೆಲ್ತ್ ಬುಲೆಟಿನ್ ವರದಿಯಲ್ಲಿ 349 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 33,300ಕ್ಕೆ ಏರಿಕೆಯಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 80, ಚಳ್ಳಕೆರೆ 91, ಹಿರಿಯೂರು 51, ಹೊಳಲ್ಕೆರೆ 48, ಹೊಸದುರ್ಗ 56, ಮೊಳಕಾಲ್ಮುರು ತಾಲ್ಲೂಕಿನ 23 ಪ್ರಕರಣಗಳು ಸೇರಿದಂತೆ ಒಟ್ಟು 349 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಜಿಲ್ಲೆಯ ಹಲವೆಡೆ ಕೋವಿಡ್ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಗುರುವಾರ 562 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಗುರುವಾರ ಒಟ್ಟು 3252 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ವರದಿಯಲ್ಲಿ 349 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 33,300ಕ್ಕೆ ಏರಿಕೆಯಾಗಿದೆ. ಕೋವಿಡ್ನಿಂದ ಇಂದು ಮೂರು ಮೃತರಾಗಿದ್ದು ಇದುವರೆಗೆ ಒಟ್ಟು 161 ಜನ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 27,949 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 5,190 ಸಕ್ರಿಯ ಪ್ರಕರಣಗಳು ಇವೆ.
ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 3,98,783 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
ಈವರೆಗೆ 5,11,458 ಜನರ ಮಾದರಿ ಸಂಗ್ರಹಿಸಲಾಗಿದ್ದು, 4,76,185 ಜನರ ವರದಿ ನೆಗೆಟೀವ್ ಬಂದಿದೆ. ಉಳಿದ 1125 ಜನರ ವರದಿ ಬರುವುದು ಬಾಕಿ ಇದೆ. 848 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಂಗನಾಥ್ ತಿಳಿಸಿದ್ದಾರೆ.
+ There are no comments
Add yours