ಕೋವಿಡ್ ರಿಪೋರ್ಟ್:ಜಿಲ್ಲೆಯಲ್ಲಿ 95 ಜನರಿಗೆ ಕೋವಿಡ್ ಸೋಂಕು ದೃಢ: 810 ಮಂದಿ ಬಿಡುಗಡೆ

 

ಜಿಲ್ಲೆಯಲ್ಲಿ 95 ಜನರಿಗೆ ಕೋವಿಡ್ ಸೋಂಕು ದೃಢ: 810 ಮಂದಿ ಬಿಡುಗಡೆ
***
ಚಿತ್ರದುರ್ಗ,ಜೂನ್15:
ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಮಂಗಳವಾರದ ವರದಿಯಲ್ಲಿ 95 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 33,997ಕ್ಕೆ ಏರಿಕೆಯಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 16, ಚಳ್ಳಕೆರೆ 18, ಹಿರಿಯೂರು 22, ಹೊಳಲ್ಕೆರೆ 19, ಹೊಸದುರ್ಗ 08, ಮೊಳಕಾಲ್ಮುರು ತಾಲ್ಲೂಕಿನ 12 ಪ್ರಕರಣಗಳು ಸೇರಿದಂತೆ ಒಟ್ಟು 95 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಮಂಗಳವಾರ 810 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಮಂಗಳವಾರ ಒಟ್ಟು 3651 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ.  ವರದಿಯಲ್ಲಿ 95 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 33,997ಕ್ಕೆ ಏರಿಕೆಯಾಗಿದೆ. ಕೋವಿಡ್‍ನಿಂದ ಇದುವರೆಗೆ ಒಟ್ಟು 166 ಜನ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 31,352 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 2,479 ಸಕ್ರಿಯ ಪ್ರಕರಣಗಳು ಇವೆ.
ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 446921 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
ಈವರೆಗೆ 5,25,598 ಜನರ ಮಾದರಿ ಸಂಗ್ರಹಿಸಲಾಗಿದ್ದು, 4,89,560 ಜನರ ವರದಿ ನೆಗೆಟೀವ್ ಬಂದಿದೆ. ಉಳಿದ 1187 ಜನರ ವರದಿ ಬರುವುದು ಬಾಕಿ ಇದೆ. 854 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಂಗನಾಥ್ ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours