ಗುಡ್ ನ್ಯೂಸ್ : ಕೋಳಿ ಸಾಗಣಿಕೆ ಸಹಾಯಧನಕ್ಕೆ ಅರ್ಜಿ ಆಹ್ವಾನ

 

 

 

 

ಚಿತ್ರದುರ್ಗ, ಡಿಸೆಂಬರ್28:
2019-20ನೇ ಸಾಲಿನಲ್ಲಿ ವಿಶೇಷ ಕೇಂದ್ರಿಯ ನೆರವಿನಡಿ ಪರಿಶಿಷ್ಟ ಪಂಗಡದವರಿಗೆ ಕೋಳಿ ಸಾಕಾಣಿಕೆ ಕೇಂದ್ರಗಳನ್ನು ಸ್ಥಾಪಿಸಲು ಸಹಾಯಧನ ನೀಡುವ ಕಾರ್ಯಕ್ರಮ ಅನುಷ್ಟಾನಗೊಳಿಸಲು ಅರ್ಜಿ ಆಹ್ವಾನಿಸಲಾಗಿದೆ. ಜನವರಿ 07 ಅರ್ಜಿ ಸಲ್ಲಿಸಲು ಕೊನೆಯ ದಿನ.
ಚಿತ್ರದುರ್ಗ ಜಿಲ್ಲೆಗೆ 09 ಭೌತಿಕ ಗುರಿಯನ್ನು ನಿಗಧಿಪಡಿಸಲಾಗಿದ್ದು, ಮೊಟ್ಟೆಕೋಳಿ ಘಟಕದ ನಿರ್ಮಾಣಕ್ಕಾಗಿ ಘಟಕದ ವೆಚ್ಚ ಒಟ್ಟು ರೂ.5,50,000/- ಇಲಾಖೆಯಿಂದ ಶೇ.75 ರಷ್ಟು ರೂ.4,12,500/- ಸಹಾಯಧನ ಮತ್ತು ಬ್ಯಾಂಕ್, ಫಲಾನುಭವಿಗಳಿಂದ ಶೇ.25 ರಷ್ಟು ರೂ.1,37,500/-ಗಳನ್ನು ಭರಿಸಬೇಕಾಗಿದ್ದು, ಮೊಟ್ಟೆಕೋಳಿ ಘಟಕಗಳ ನಿರ್ಮಾಣಕ್ಕಾಗಿ ಫಲಾನುಭವಿಗಳನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಡಿಸೆಂಬರ್ 27 ರಿಂದ ಜನವರಿ 07 ರವರೆಗೆ ಅರ್ಜಿಗಳನ್ನು ಸಂಬಂಧಿಸಿದ ತಾಲ್ಲೂಕು ಸಹಾಯಕ ನಿರ್ದೇಶಕರ ಕಚೇರಿ, ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ, ಹೊಸದುರ್ಗ, ಹಿರಿಯೂರು, ಹೊಳಲ್ಕೆರೆ ಮತ್ತು ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಚಳ್ಳಕೆರೆ, ಚಿತ್ರದುರ್ಗ ಮತ್ತು ಮೊಳಕಾಲ್ಮುರು ಇಲ್ಲಿ ಕಚೇರಿ ವೇಳೆಯಲ್ಲಿ ಪಡೆಯಬಹುದಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಜನವರಿ 08 ಸಂಜೆ 5.30ರೊಳಗಾಗಿ ಸಂಬಂಧಪಟ್ಟ ತಾಲ್ಲೂಕಿನ ಕಚೇರಿಗೆ ಸಲ್ಲಿಸಲು ತಿಳಿಸಿದೆ.
ಅರ್ಜಿದಾರರು ಪರಿಶಿಷ್ಟ ವರ್ಗದವರಿಗೆ ಸೇರಿರಬೇಕು. ಕೋಳಿ ಸಾಕಾಣಿಕೆಯ ಶೆಡ್ ನಿರ್ಮಾಣಕ್ಕೆ ಅಗತ್ಯವಾದ ನಿವೇಶನ ಹಾಗೂ ನೀರಿನ ಸೌಲಭ್ಯ ಹೊಂದಿರಬೇಕು. ತಮ್ಮ ಗ್ರಾಮ ಪಂಚಾಯಿತಿಯಿಂದ ನಿರಾಕ್ಷೇಪಣಾ ಪತ್ರ ಪಡೆದು ಅರ್ಜಿಯೊಂದಿಗೊ ಲಗತ್ತಿಸಬೇಕು. ಅರ್ಜಿದಾರರು ಜಮೀನಿನಲ್ಲಿ ವಿದ್ಯುತ್ ಸಂಪರ್ಕ ಹೊಂದಿರಬೇಕು. ಆರೋಗ್ಯ ಹಾಗೂ ಪಶು ಸಂಗೋಪನೆ ಇಲಾಖೆಯ ಅನುಮತಿ ಪಡೆದು ಅರ್ಜಿಯೊಂದಿಗೆ ಲಗತ್ತಿಸಬೇಕು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

 

 

[t4b-ticker]

You May Also Like

More From Author

+ There are no comments

Add yours