ಗುಡ್ ನ್ಯೂಸ್: ವಾಲ್ಮೀಕಿ ಅಭಿವೃದ್ದಿ ನಿಗಮದಿಂದ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ.

 

ವಿಧ ಯೋಜನೆಗಳಡಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
*****
ಚಿತ್ರದುರ್ಗ,ಜುಲೈ30:
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ 2021-22ನೇ ಸಾಲಿಗೆ ಪರಿಶಿಷ್ಟ ಪಂಗಡದ ಜನರ ಆರ್ಥಿಕ ಅಭಿವೃದ್ಧಿಗಾಗಿ ನಿಗಮದ ವಿವಿಧ ಯೋಜನೆಗಳನ್ನು ಅನುಷ್ಟಾನಗೊಳಿಸುವ ಸಂಬಂಧ ಪರಿಶಿಷ್ಟ ಪಂಗಡದ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 25 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ನಿಗಮದಿಂದ ಅನುಷ್ಟಾನಗೊಳಿಸುತ್ತಿರುವ ಯೋಜನೆಗಳು ಹಾಗೂ ಪರಿಶಿಷ್ಟ ಪಂಗಡದ ಅಲೆಮಾರಿ, ಅರೆಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಹಾಗೂ ಆದಿವಾಸಿ ಜನಾಂಗದವರಿಗಾಗಿ ಅನುಷ್ಠಾನಗೊಳಿಸುತ್ತಿರುವ ಯೋಜನೆಗಳ ವಿವರ ಇಂತಿವೆ. ಸ್ವಯಂ ಉದ್ಯೋಗ ಕಾರ್ಯಕ್ರಮಗಳಲ್ಲಿ ಸ್ವಯಂ ಉದ್ಯೋಗ-ನೇರಸಾಲ ಯೋಜನೆ, ಉದ್ಯಮಾ ಶೀಲತಾ ಅಭಿವೃದ್ಧಿ ಯೋಜನೆ, ಪ್ರೇರಣಾ (ಮೈಕ್ರೋ ಕ್ರೆಡಿಟ್ ಫೈನಾನ್ಸ್) ಯೋಜನೆ (ನೊಂದಾಯಿತ ಮಹಿಳಾ ಸ್ವ-ಸಹಾಯ ಸಂಘದವರಿಗೆ). ಭೂ ಒಡೆತನ ಯೋಜನೆ., ಸಮಗ್ರ ಗಂಗಾ ಕಲ್ಯಾಣ ಯೋಜನೆ.
ಫಲಾಪೇಕ್ಷಿಗಳು ಜುಲೈ30 ರಿಂದ ಆಗಸ್ಟ್ 25 ರವರೆಗೆ ಆನ್‍ಲೈನ್ ಮೂಲಕ ಅರ್ಜಿಗಳನ್ನು ಮತ್ತು ದಾಖಲೆಗಳನ್ನು ನಿಗಮದ ವೆಬ್‍ಸೈಟ್:https://kmvstdcl.karnataka.gov.in  ಮೂಲಕ ಆಪ್‍ಲೋಡ್ ಮಾಡಬೇಕು. ನಿಗಮದಿಂದ ಸೌಲಭ್ಯ ಪಡೆಯಲು ಇರಬೇಕಾದ ಸಾಮಾನ್ಯ ಅರ್ಹತೆಗಳು ಮತ್ತು ಷರತ್ತುಗಳನ್ನು ನಿಗಮ ಜಿಲ್ಲಾ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ಕಚೇರಿ ಅಥವಾ ದೂರವಾಣಿ ಸಂಖ್ಯೆ 08194-221055 ಗೆ ಸಂರ್ಪಕಿಸಬಹುದು ಎಂದು  ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಠ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಣೆಯಲ್ಲಿ ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours