ಗುರುವಾರದ ಹೆಲ್ತ್ ಬುಲೆಟಿನ್,  ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ ಇಬ್ಬರು ಬಲಿ, ಸೋಂಕಿತರ ಸಂಖ್ಯೆ 179ಕ್ಕೆ ಏರಿಕೆ…

 

 

ಚಿತ್ರದುರ್ಗ:ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಗುರುವಾರದ ಹೆಲ್ತ್ ಬುಲೆಟಿನ್ ವರದಿಯಲ್ಲಿ 33 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 34,806ಕ್ಕೆ ಏರಿಕೆಯಾಗಿದೆ.

ಚಿತ್ರದುರ್ಗ ತಾಲ್ಲೂಕಿನಲ್ಲಿ 7, ಚಳ್ಳಕೆರೆ 15, ಹಿರಿಯೂರು 2, ಹೊಳಲ್ಕೆರೆ 0, ಹೊಸದುರ್ಗ 6, ಮೊಳಕಾಲ್ಮುರು ತಾಲ್ಲೂಕಿನ 3 ಪ್ರಕರಣಗಳು ಸೇರಿದಂತೆ ಒಟ್ಟು 33 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಗುರುವಾರ 242 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಗುರುವಾರ ಒಟ್ಟು 3208 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ.  ವರದಿಯಲ್ಲಿ 33 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 34,806ಕ್ಕೆ ಏರಿಕೆಯಾಗಿದೆ. ಕೋವಿಡ್‍ನಿಂದ ಇಂದು ಇಬ್ಬರು ಮೃತಪಟ್ಟಿದ್ದು ಇದುವರೆಗೆ ಒಟ್ಟು 179 ಜನ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 33,446 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 1,181 ಸಕ್ರಿಯ ಪ್ರಕರಣಗಳು ಇವೆ.

[t4b-ticker]

You May Also Like

More From Author

+ There are no comments

Add yours