ಚರ್ಮಗಾರಿಕೆ ವೃತ್ತಿಯಲ್ಲಿ ತೊಡಗಿರುವ ಕುಶಲಕರ್ಮಿಗಳಿಗೆ ಆರ್ಥಿಕ ಸಹಾಯ: ರೂ. 10 ಕೋಟಿ ಅನುದಾನ ಬಿಡುಗಡೆ:ಸಚಿವ ಶ್ರೀರಾಮುಲು

 

 

 

 

ಚಿತ್ರದುರ್ಗ,ಜೂನ್06:
 ಜಗತ್ತಿನಾದ್ಯಂತ ಕೊರೊನಾ ವೈರಾಣು ವ್ಯಾಪಕವಾಗಿ ಹರಡಿ ಮನುಕುಲವನ್ನುಘಾಸಿಗೊಳಿಸಿದೆ. ಈ ವೈರಾಣು ಹರಡದಂತೆ  ತಡೆಗಟ್ಟುವ  ನಿಟ್ಟಿನಲ್ಲಿ  ಕೇಂದ್ರ  ಮತ್ತು ರಾಜ್ಯ ಸರ್ಕಾರಗಳು ದಿಟ್ಟ ನಿರ್ಧಾರ  ಕೈಗೊಂಡು ಎರಡನೇ ಬಾರಿ ರಾಜ್ಯಾದ್ಯಂತ ಲಾಕ್‍ಡೌನ್ ಜಾರಿಗೊಳಿಸಿದೆ.
 ಇದರಿಂದ ಜನಜೀವನ ಸ್ಥಗಿತಗೊಂಡಂತಾಗಿದ್ದು, ಸಣ್ಣಪುಟ್ಟ ಉದ್ಯೋಗಗಳಲ್ಲಿ ತೊಡಗಿ ಜೀವನ ನಿರ್ವಹಣೆ ಮಾಡುತ್ತಿದ್ದು ಬಡ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುತ್ತವೆ. ಇವರಲ್ಲಿ ರಾಜ್ಯಾದ್ಯಂತ ಚರ್ಮಗಾರಿಕೆ ವೃತ್ತಿಯಲ್ಲಿ ತೊಡಗಿ ರಸ್ತೆ ಬದಿ, ಹೋಟೆಲ್ ಮತ್ತು ಬಸ್ ನಿಲ್ದಾಣಗಳ  ಮುಂಭಾಗ ಕುಳಿತು ಪಾದರಕ್ಷೆ ಮತ್ತು ಇತರೆ ಚರ್ಮ ವಸ್ತುಗಳ ದುರಸ್ತಿ ಹಾಗೂ ಪಾಲಿಷ್ ಮಾಡುವ ಕಾರ್ಯದಲ್ಲಿ ತೊಡಗಿರುವ ಮತ್ತು ಮನೆಗಳಲ್ಲಿ ಚರ್ಮ ವೃತಿಯಲ್ಲಿ ತೊಡಗಿಡುವ ಚರ್ಮ ಕುಶಲಕರ್ಮಿಗಳು ಸಹ ಆರ್ಥಿಕವಾಗಿ ತೊಂದರೆ ಅನುಭವಿಸುತ್ತಿದ್ದನ್ನು ಮನಗಂಡು ರಾಜ್ಯದ ಮುಖ್ಯಮಂತ್ರಿಗಳು ಮೇ 19 ರಂದು ಚರ್ಮಗಾರಿಕೆ ವೃತ್ತಿಯಲ್ಲಿ ತೊಡಗಿರುವ 50,000 ಕುಶಲಕರ್ಮಿ ಕುಟುಂಬಗಳಿಗೆ ತಾತ್ಕಾಲಿಕ ಪರಿಹಾರವಾಗಿ ಪ್ರತಿ ಕುಟುಂಬಕ್ಕೆ ರೂ.2000/- ಗಳ ಆರ್ಥಿಕ ಸಹಾಯ ನೀಡಲು ಘೋಷಣೆ ಮಾಡಿ ರೂ.10.00ಕೋಟಿ ಅನುದಾನ ಬಿಡುಗಡೆ ಮಾಡಿರುತ್ತಾರೆ.
ಜೂನ್ 15 ಅರ್ಜಿ ಸಲ್ಲಿಸಲು ಕೊನೆಯ ದಿನ: ಈ ಪರಿಹಾರದ ಹಣವನ್ನು “ಸೇವಾಸಿಂಧು” ಪೋರ್ಟ್‍ಲ್ ಮೂಲಕ ಆನ್‍ಲೈನ್ ಅರ್ಜಿಗಳನ್ನು ಆಹ್ವಾನಿಸಿ, ಡಿಬಿಟಿ ಮುಖಾಂತರ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮಾ ಮಾಡಲಾಗುವುದು. ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕೆ ಅಭಿವದ್ಧಿ ನಿಗಮದಿಂದ ಈ ಬಗ್ಗೆ ಅಗತ್ಯ ಕ್ರಮವಹಿಸಲಾಗುತ್ತದೆ. ಫಲಾನುಭವಿಗಳು ಜೂನ್ 03 ರಿಂದ ಜೂನ್ 15 ರವರೆಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
 ಫಲಾನುಭವಿಗಳು ಪರಿಹಾರ ಧನವನ್ನು ಪಡೆಯಲು ಅರ್ಜಿಗಳನ್ನು ತಮ್ಮ ಮೊಬೈಲ್‍ನಿಂದ ಬೆಂಗಳೂರು ಒನ್ ಕೇಂದ್ರ, ಅಟಲ್ ಜನಸ್ನೇಹಿ ಕೇಂದ್ರ ಇವುಗಳಲ್ಲಿ ಉಚಿತವಾಗಿ ಸಲ್ಲಿಸಬಹುದಾಗಿದೆ.
 ಲಿಡ್ಕರ್ ಸಂಸ್ಥೆಯ ಜಿಲ್ಲಾ ಸಂಯೋಜಕರುಗಳು ಸಂಪೂರ್ಣವಾಗಿ ಮಾಹಿತಿಯನ್ನು ಹೊಂದಿ ಹೆಲ್ಪ್‍ಡೆಸ್ಕ್‍ನಂತೆ ಕಾರ್ಯನಿರ್ವಹಿಸಿ ಫಲಾನುಭವಿಗಳಿಗೆ ಯೋಜನೆ ವಿವರ ಮತ್ತು ಅರ್ಜಿ ಸಲ್ಲಿಸುವ ಬಗ್ಗೆ ಮಾರ್ಗದರ್ಶನ ಮಾಡುವರು.
 ಯಾವುದೇ ವಿಳಂಬವಿಲ್ಲದೆ  ಅರ್ಜಿ ಸಲ್ಲಿಸುವ ಫಲಾನುಭವಿಗಳ  ವಿವರಗಳನ್ನು ಸರ್ಕಾರವು ನಿಗದಿಪಡಿಸಿರುವ ಮಾರ್ಗಸೂಚಿಗಳ ಪ್ರಕಾರ ಪರಿಶೀಲಿಸಿ ಅರ್ಹ ಫಲಾನುಭವಿಗಳಿಗೆ ಕೂಡಲೇ ಪರಿಹಾರ ಧನ ಜಮಾ ಮಾಡಲು ಲಿಡ್ಕರ್ ಸಂಸ್ಥೆಗೆ ನಿರ್ದೇಶನ ನೀಡಲಾಗಿದೆ. ಸರ್ಕಾರವು ನೀಡುವ ಪರಿಹಾರ ನೀಡುವ ಪರಿಹಾರದ ಹಣವನ್ನು ಸದ್ಭಳಕೆ ಮಾಡಿಕೊಂಡು ಜೀವನ ನಿರ್ವಹಿಸುವುದು. ಇನ್ನೂ ಮುಂದೆಯು ಸಹ ನಿಮ್ಮ ಉದ್ಯೋಗ ಮುಂದುವರೆಸಲು ಮತ್ತು ಆರ್ಥಿಕವಾಗಿ ಸದೃಢರಾಗಲು ಅವಶ್ಯವಿರುವ ಯೋಜನೆಗಳನ್ನು, ಕಾರ್ಯಕ್ರಮಗಳನ್ನು ಸರ್ಕಾರವು ನೀಡಲಿದೆ. ಸರ್ಕಾರವು ನಿಮ್ಮ ಸಂಕಷ್ಟಗಳಿಗೆ ಸ್ಪಂದಿಸಿ ಸದಾ ನಿಮ್ಮ ಜೊತೆಯಲ್ಲಿರುತ್ತದೆ. ನೀವು ಯಾವುದೇ ಆತಂಕಕ್ಕೆ ಒಳಗಾಗುವ ಅಗತ್ಯವಿರುವುದಿಲ್ಲ. ಅಲ್ಲದೇ ಸರ್ಕಾರವು ನೀಡಿರುವ ಸೂಚನೆಗಳನ್ವಯ ಕೊರೊನಾ ವೈರಸ್ ಹರಡದಂತೆ ನಿಮ್ಮ ಆರೋಗ್ಯ ರಕ್ಷಣೆ ಮಾಡುವ ನಿಟ್ಟಿನಲ್ಲಿ  ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು. ವೈಯಕ್ತಿಕ ಸ್ವಚ್ಛತೆ ಕಾಪಾಡಿಕೊಳ್ಳುವುದು, ಮಾಸ್ಕ್‍ಗಳನ್ನು ಧರಿಸುವುದು, ಕೈಗಳನ್ನು ಸ್ವಚ್ಚಗೊಳಿಸುವುದು ಸೇರಿದಂತೆ ಕೋವಿಡ್ ನಿಯಮ ಪಾಲನೆ ಮಾಡಬೇಕು ಎಂದು ಸಮಾಜ ಕಲ್ಯಾಣ ಸಚಿವರಾದ  ಬಿ.ಶ್ರೀರಾಮುಲು ತಿಳಿಸಿದ್ದಾರೆ

 

 

[t4b-ticker]

You May Also Like

More From Author

+ There are no comments

Add yours