ಚಿತ್ರದುರ್ಗಕ್ಕೆ ಸರ್ಕಾರಿ ಮೆಡಿಕಲ್ ಕಾಲೇಜು, ಆರೋಗ್ಯ ಕ್ಷೇತ್ರಕ್ಕೆ ಸಿಎಂ ಬೊಮ್ಮಾಯಿ ಕೊಟ್ಟ ಭರಪೂರ ಕೊಡುಗೆಗಳು

 

 

 

 

ಬೆಂಗಳೂರು: ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ಅವರ ಚೊಚ್ಚಲ ಬಜೆಟ್​ನಲ್ಲಿ ಆರೋಗ್ಯ ಕ್ಷೇತ್ರಕ್ಕೂ ಭರಪೂರ ಯೋಜನೆ ಮತ್ತು ತುರ್ತು ವೈದ್ಯಕೀಯ ಸೇವೆಗೆ ಆದ್ಯತೆ ನೀಡಲಾಗಿದೆ.

 

 

  • ಚಿತ್ರದುರ್ಗಕ್ಕೆ ಹೊಸ ವೈದ್ಯಕೀಯ ಕಾಲೇಜು
  • ಯಾದಗಿರಿ ಜಿಲ್ಲಾ ಆಸ್ಪತ್ರೆಯಲ್ಲಿ ಆಯುಷ್​ ಕೇಂದ್ರ ಸ್ಥಾಪನೆ
  • ರಾಮನಗರದ ಅರ್ಚಕರ ಹಳ್ಳಿಯಲ್ಲಿ ರಾಜೀವ್​ಗಾಂಧಿ ಆರೋಗ್ಯ ಕೇಂದ್ರ ಸ್ಥಾಪನೆ
  • ಬೀದರ್, ಚಾಮರಾಜನಗರ, ಹಾವೇರಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮುಖ್ಯಮಂತ್ರಿ ಆರೋಗ್ಯವಾಹಿನಿ ಘೋಷಣೆ
  • ಹಾವೇರಿ, ಶಿಗ್ಗಾಂವಿ ಆಸ್ಪತ್ರೆ ಮೇಲ್ದರ್ಜೆಗೆ
  • ತುರ್ತು ವೈದ್ಯಕೀಯ ಸೇವೆಗೆ ಏರ್‌ ಆಯಂಬುಲೆನ್ಸ್‌ ಸೇವೆ
  • ನೂತನ 100 ಪಶುಚಿಕಿತ್ಸಾಲಯ ಸ್ಥಾಪನೆ
  • ರಾಜ್ಯದ ಪ್ರಮುಖ ನಗರಗಳಲ್ಲಿ 438 ‘ನಮ್ಮ ಕ್ಲಿನಿಕ್’ ಸ್ಥಾಪನೆ. ಬೆಂಗಳೂರಿನ ಎಲ್ಲ ವಾರ್ಡಗಳಲ್ಲಿ ಸ್ಥಾಪನೆ.
  • ರಾಜ್ಯದ 75 ತಾಲ್ಲೂಕು ಆಸ್ಪತ್ರೆಗಳನ್ನು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯೊಂದಿಗೆ ಮ್ಯಾಪಿಂಗ್ ಮಾಡಿ ಗ್ರಾಮೀಣ ಜನರಿಗೆ ತಾಲ್ಲೂಕು ಮಟ್ಟದಲ್ಲಿ ಹೃದಯ ಸಂಬಂಧಿ ಚಿಕಿತ್ಸೆ ಒದಗಿಸುವುದು.
  • ಅಪಘಾತಕ್ಕೊಳಗಾದ ರೋಗಿಗಳಿಗೆ ಆಸ್ಪತ್ರೆಗೆ ದಾಖಲಾದ 48 ಗಂಟೆಗಳೊಳಗಾಗಿ 76 ಅವಶ್ಯ ಜೀವ ರಕ್ಷಕ ಆರೋಗ್ಯ ಸೇವೆ ಒದಗಿಸುವ ಯೋಜನೆಯನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ಪ್ರಾರಂಭ.
[t4b-ticker]

You May Also Like

More From Author

+ There are no comments

Add yours