ಚಿನ್ಮಯಿ ಟ್ರಸ್ಟ್ ವತಿಯಿಂದ ಪತ್ರಕರ್ತರಿಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಿಸಲಾಯಿತು….

 

ಚಿತ್ರದುರ್ಗ:

ಚಿನ್ಮಯಿ ಟ್ರಸ್ಟ್ ವತಿಯಿಂದ ಪತ್ರಕರ್ತರ ಭವನದಲ್ಲಿ ಸೋಮವಾರ ಪತ್ರಕರ್ತರಿಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್‌ಗಳನ್ನು ವಿತರಿಸಲಾಯಿತು.
ಪತ್ರಕರ್ತರಿಗೆ ಮಾಸ್ಕ್‌ಗಳನ್ನು ವಿತರಿಸಿ ಮಾತನಾಡಿದ ಚಿನ್ಮಯಿ ಟ್ರಸ್ಟ್‌ನ ಗೀತಾ ಕೊರೊನಾ ಮಹಾಮಾರಿ ಇಡಿ ಜಗತ್ತಿಗೆ ಆವರಿಸಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್‌ಗಳನ್ನು ಧರಿಸಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಮೂಲಕ ಕೋವಿಡ್-೧೯ ವಿರುದ್ದ ಜಾಗೃತರಾಗಿರುವಂತೆ ಮನವಿ ಮಾಡಿದರು.
ಈಗಾಗಲೆ ಪೊಲೀಸ್ ಇಲಾಖೆ, ಮುರುಘಾಮಠದ ಬಸವ ಮಕ್ಕಳಿಗೆ, ಕಬೀರಾನಂದಾಶ್ರಮದಲ್ಲಿನ ವೃದ್ದರಿಗೆ ಮಾಸ್ಕ್‌ಗಳನ್ನು ವಿತರಿಸಿದ್ದೇನೆ. ಹೃದಯಾಘಾತಕ್ಕೊಳಗಾದವರ ಹಾಗೂ ಕ್ಯಾನ್ಸರ್ ರೋಗಿಗಳಿಗೆ ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ಕೊಡಿಸುವಲ್ಲಿ ಕಳೆದ ಹತ್ತು ವರ್ಷಗಳಿಂದ ಪ್ರಾಮಾಣಿಕ ಸೇವೆ ಸಲ್ಲಿಸುತ್ತಿದ್ದು, ಹೆಣ್ಣು ಮಕ್ಕಳ ಮೇಲೆ ನಡೆಯುವ ದೌರ್ಜನ್ಯ, ವರದಕ್ಷಿಣೆ ಕಿರುಕುಳದ ವಿರುದ್ದ ಹೋರಾಡುತ್ತಿದ್ದೇನೆ. ಕೊರೋನಾ ವೈರಸ್ ನಿಗ್ರಹಕ್ಕೆ ಸರ್ಕಾರದ ಜೊತೆ ಸಾರ್ವಜನಿಕರು ಕೈಜೋಡಿಸುವ ಅಗತ್ಯವಿದೆ ಎಂದು ಹೇಳಿದರು.
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹೆಚ್.ಲಕ್ಷ್ಮಣ, ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿಣಿ ಸದಸ್ಯ ನರೇನಹಳ್ಳಿ ಅರುಣ್‌ಕುಮಾರ್, ಹಾಸ್ಯ ಕವಿ ಜಗನ್ನಾಥ್ ವೇದಿಕೆಯಲ್ಲಿದ್ದರು.

[t4b-ticker]

You May Also Like

More From Author

+ There are no comments

Add yours