ಚುನಾವಣೆ ಚಾಣಕ್ಯ ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಸಾಧ್ಯತೆ.

 

ನವದೆಹಲಿ: ದೇಶದಲ್ಲಿ ಕಾಂಗ್ರೆಸ್ ನೆಲಕಚ್ಚಿ ಸೋತು ಸುಣ್ಣವಾಗಿದ್ದು ಇಂತಹ ಸಂದರ್ಭದಲ್ಲಿ ಹಲವು ತಂತ್ರಗಳ ಮೂಲಕ ಅನೇಕ ರಾಜ್ಯಗಳ  ಚುನಾವಣೆಗಳನ್ನು ಗೆಲ್ಲಿಸುವಲ್ಲಿ ಯಶಸ್ವಿಯಾಗಿದ್ದು  ಚುನಾವಣೆ ಚಾಣಕ್ಯ ಎಂದೇ ಖ್ಯಾತಿ‌ ಹೊಂದಿರುವ  ಪ್ರಶಾಂತ್ ಕಿಶೋರ್ ಅವರು 2024ರ ಚುನಾವಣೆಗೆ ಕಾಂಗ್ರೆಸ್ ಸಜ್ಜುಗೊಳಿಸಲು ಮಹತ್ವದ ತಿರ್ಮಾನ ಕೈಗೊಳ್ಳಲು ಮುಂದಾಗಿದ್ದಾರೆ.. ಇದರ ನಡುವೆ ಪ್ರಶಾಂತ್ ಕಿಶೋರ್‌ಗೆ ಕಾಂಗ್ರೆಸ್ ಭರ್ಜರಿ ಆಫರ್ ನೀಡಿದೆ. ಸಲಹೆಗಾರನಾಗುವ ಬದಲು ಕಾಂಗ್ರೆಸ್ ಪಕ್ಷಕ್ಕೆ ಸೇರಿಕೊಳ್ಳುವಂತೆ ಪ್ರಶಾಂತ್ ಕಿಶೋರ್‌ಗೆ ಆಹ್ವಾನ ನೀಡಿದೆ.

ಪ್ರಶಾಂತ್ ಕಿಶೋರ್ ಕೂಡ ಕಾಂಗ್ರೆಸ್ ಪಕ್ಷಕ್ಕೆ ಸೇರಿಕೊಳ್ಳಲು ಆಸಕ್ತಿ ತೋರಿದ್ದಾರೆ. ಈ ಹಿಂದಿನ ಚುನಾವಣೆಗಳಲ್ಲಿ ಪ್ರಶಾಂತ್ ಕಿಶೋರ್ ಚುನಾವಣಾ ತಂತ್ರಗಾರನಾಗಿ, ಸಲಹೆಗಾರನಾಗಿ ಕೆಲಸ ಮಾಡಿದ್ದ ಪ್ರಶಾಂತ್ ಇದೀಗ ಕಾಂಗ್ರೆಸ್ ನಾಯಕನಾಗಿ ಮುಂದುವರಿಯಲು ಸಜ್ಜಾಗಿದ್ದಾರೆ.

ಪ್ರಶಾಂತ್ ಕಿಶೋರ್ ಸಲಹೆಯಂತೆ 2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 370 ಸ್ಥಾನಗಳಲ್ಲಿ ಸ್ಪರ್ಧಿಸಲು ಮುಂದಾಗಿದೆ ಅನ್ನೋ ಮಾತುಗಳು ಕೇಳಿಬಂದಿದೆ. ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಪಕ್ಷ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮುನ್ನಡೆಗೆ ಅಗತ್ಯವಾದ  ಮಾರ್ಗಗಳ ಕುರಿತು ತಿಳಿಸಿದ್ದಾರೆ. ಸೋನಿಯ ಗಾಂಧಿ ಹಾಗೂ ರಾಹುಲ್ ಗಾಂಧಿ ಜೊತೆಗಿನ ಮಾತುಕತೆಯಲ್ಲಿ ಹಲವು ಮಹತ್ವದ ವಿಚಾರಗಳನ್ನು ತಿಳಿಸಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಕೆಸಿ ವೇಣುಗೋಪಾಲ್ ಹೇಳಿದ್ದಾರೆ.

[t4b-ticker]

You May Also Like

More From Author

+ There are no comments

Add yours