ಚಿತ್ರದುರ್ಗ, ಜುಲೈ05:
ಚಿತ್ರದುರ್ಗ ಜಿಲ್ಲೆಯ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 17 ಕೊನೆಯ ದಿನವಾಗಿದೆ.
10 ವರ್ಷಗಳ ಕಾಲ ವಕೀಲ ವೃತ್ತಿ ಪೂರೈಸಿದ ಅರ್ಹ ವಕೀಲರುಗಳು ಜುಲೈ 17ರ ಸಂಜೆ 5.30ರೊಳಗಾಗಿ ಜಿಲ್ಲಾಧಿಕಾರಿಗಳ ಕಾರ್ಯಾಲಯ ಚಿತ್ರದುರ್ಗ ನಿಗದಿಪಡಿಸಿದ ಅರ್ಜಿ ನಮೂನೆಯಲ್ಲಿ ಸೂಕ್ತ ದಾಖಲಾತಿಗಳೊಂದಿಗೆ ಒಪ್ಪಿಸಲು ತಿಳಿಸಿದೆ.
ಅರ್ಜಿ ನಮೂನೆಯನ್ನು ಜಿಲ್ಲಾಧಿಕಾರಿಗಳ ಕಚೇರಿ, ಚಿತ್ರದುರ್ಗ ಇಲ್ಲಿ ಕಚೇರಿ ಕೆಲಸದ ವೇಳೆಯಲ್ಲಿ ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
=====
[t4b-ticker]
+ There are no comments
Add yours