ಜಿಲ್ಲೆಯಲ್ಲಿ 45 ಜನರಿಗೆ ಕೋವಿಡ್ ಸೋಂಕು ದೃಢ: 90 ಮಂದಿ ಬಿಡುಗಡೆ

 

ಚಿತ್ರದುರ್ಗ,ಜೂನ್28:
ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಸೋಮವಾರದ ವರದಿಯಲ್ಲಿ 45 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 34,961ಕ್ಕೆ ಏರಿಕೆಯಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 23, ಚಳ್ಳಕೆರೆ 4, ಹಿರಿಯೂರು 6, ಹೊಳಲ್ಕೆರೆ 5, ಹೊಸದುರ್ಗ 2, ಮೊಳಕಾಲ್ಮುರು ತಾಲ್ಲೂಕಿನ 5 ಪ್ರಕರಣಗಳು ಸೇರಿದಂತೆ ಒಟ್ಟು 45 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಸೋಮವಾರ 90 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಸೋಮವಾರ ಒಟ್ಟು 1535 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ.  ವರದಿಯಲ್ಲಿ 45 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 34,961ಕ್ಕೆ ಏರಿಕೆಯಾಗಿದೆ. ಕೋವಿಡ್‍ನಿಂದ ಇದುವರೆಗೆ ಒಟ್ಟು 179 ಜನ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 33,885 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 897 ಸಕ್ರಿಯ ಪ್ರಕರಣಗಳು ಇವೆ.
ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 473368 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
ಈವರೆಗೆ 5,63,678 ಜನರ ಮಾದರಿ ಸಂಗ್ರಹಿಸಲಾಗಿದ್ದು, 5,27,414 ಜನರ ವರದಿ ನೆಗೆಟೀವ್ ಬಂದಿದೆ. ಉಳಿದ 437 ಜನರ ವರದಿ ಬರುವುದು ಬಾಕಿ ಇದೆ. 866 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಂಗನಾಥ್ ತಿಳಿಸಿದ್ದಾರೆ.
=======

[t4b-ticker]

You May Also Like

More From Author

+ There are no comments

Add yours