ಜೂನ್ 30 ರಿಂದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಆರಂಭ.

 

 

 

ಬೆಂಗಳೂರು: ಶಿಕ್ಷಕರ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆ ಜೂನ್ 30 ಬುಧವಾರ ಪ್ರಕಟಗೊಳ್ಳಲಿದ್ದು, ಆಂದಿನಿಂದಲೇ ವರ್ಗಾವಣೆ ಪ್ರಕ್ರಿಯೆ ಕಾರ್ಯ ಆರಂಭವಾಗಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದರು.
ಸುದ್ದಿಗೋಷ್ಠಿ ಉದ್ದೇಶಿಸಿ  ಮಾತನಾಡಿದ ಸಚಿವರು  ಹಲವು ದಿನಗಳಿಂದ ನಿರೀಕ್ಷೆಯಲ್ಲಿದ್ದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಚಾಲನೆ ನೀಡಲಾಗುತ್ತಿದ್ದು ಜೂನ್ 30ರಿಂದ ಅಧಿಸೂಚನೆ ಹೊರಡಿಸಲಾಗುತ್ತಿದೆ ಎಂದರು. ಶಿಕ್ಷಣ ಮಿತ್ರ ಆಪ್ ಮೂಲಕ ಆನ್ ಲೈನ್ ನಲ್ಲಿಯೇ ಕೌನ್ಸಲಿಂಗ್ ನಡೆಯಲಿದ್ದು  ಮನೆಯಲ್ಲಿಯೇ ಕುಳಿತು ಶಿಕ್ಷಕರು ಕೌನ್ಸೆಲಿಂಗ್ ನಲ್ಲಿ ಭಾಗವಹಿಸಬಹುದು. ಸ್ಥಳ ಆಯ್ಕೆ ಬಗ್ಗೆಯೂ ಅವಕಾಶ ನೀಡಲಾಗುತ್ತಿದೆ ಎಂದು ಹೇಳಿದರು.
[t4b-ticker]

You May Also Like

More From Author

+ There are no comments

Add yours