ದೊಡ್ಡಸಿದ್ದವ್ವನಹಳ್ಳಿ ವಾಸ್ತವ್ಯ ಮಾಡಿ ವಿಧಾನಸಭೆಗೆ ನಾನೇ ಕಾಂಗ್ರೆಸ್ ಅಭ್ಯರ್ಥಿ ಅಂದವರು ಯಾರು?

 

ಚಿತ್ರದುರ್ಗ, ಡಿ.6: ರಾಜ್ಯ ವಿಧಾನ ಸಭಾ ಚುನಾವಣೆಗೆ ಇನ್ನೂ ಒಂದೂವರೆ ವರ್ಷ ಬಾಕಿ ಇರುವಂತೆಯೇ ಹಾಲಿ ವಿಧಾನ ಪರಿಷತ್ ಸದಸ್ಯ ರಘು ಆಚಾರ್ ಚಿತ್ರದುರ್ಗ ವಿಧಾನ ಸಭಾ ಕ್ಷೇತ್ರದ ದೊಡ್ಡ ಸಿದ್ದವ್ವನಹಳ್ಳಿಯಲ್ಲಿ
ಗ್ರಾಮ ವಾಸ್ತವ್ಯ ಮಾಡುವ ಮೂಲಕ ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಸ್ವರ್ಧೆ ನಡೆಸಲು ಇಂದಿನಿಂದಲೇ ತಯಾರಿಯನ್ನು ನಡೆಸಿದ್ದಾರೆ.

ಕಳೆದ 2013 ರಲ್ಲಿ ವಿಧಾನ ಪರಿಷತ್ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಜಿಲ್ಲೆಗೆ ಆಗಮಿಸಿದ ಮೈಸೂರು ಮೂಲದ ರಘು ಆಚಾರ್ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗಲೇ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ನಡೆಸಿ ಆಡಳಿತ ರೂಡ ಕಾಂಗ್ರೇಸ್ ಅಭ್ಯರ್ಥಿ ಸೇತೂರಾಂ ಹಾಗೂ ಬಿಜೆಪಿ ಅಭ್ಯರ್ಥಿ ಕೆ.ಎಸ್.ನವೀನ್ ವಿರುದ್ದ ಜಯ‌ಭೇರಿ‌ ಸಾಧಿಸಿದ್ದರು. ನಂತರ ಕಾಂಗ್ರೆಸ್ ಪಕ್ಷವನ್ನು ಸೇರಿ 2015 ರಲ್ಲಿ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕೂಡ ಜಯಭೇರಿ ಸಾಧಿಸಿದ್ದರು. ಆದರೆ ಇಂದಿನ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷದಿಂದಲೇ ರಘು ಆಚಾರ್ ಸ್ಪರ್ಧೆ ನಡೆಸಬಹುದು ಎಂದು ತಿಳಿದಿದ್ದ ಜಿಲ್ಲೆಯ ವಿವಿಧ ಪಕ್ಷದ ಬಹುತೇಕ ಮುಖಂಡರು ಹಾಗೂ ಜನರಿಗೆ ಷಾಕ್ ನೀಡಿ, ರಘ ಆಚಾರ್ ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧೆ ನಡೆಸದೆ, ಇದೀಗ ಚಿತ್ರದುರ್ಗ ವಿಧಾನ ಸಭಾ ಕ್ಷೇತ್ರವಾದ ದೊಡ್ಡ ಸಿದ್ದವ್ವನಹಳ್ಳಿಯಲ್ಲಿ ಭಾನುವಾರ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಮನೆಯಲ್ಲಿ ಗ್ರಾಮ ವಾಸ್ತವ್ಯ ಮಾಡುವ ಮೂಲಕ ಮುಂಬರುವ ವಿಧಾನ ಸಭಾ ಚುನಾವಣೆಗೆ ಇಂದಿನಿಂದಲೇ ತಯಾರಿ ನಡೆಸಿದ್ದಾರೆ.

ಭಾನುವಾರ ರಾತ್ರಿ 9 ಗಂಟೆ ಸುಮಾರಿಗೆ ದೊಡ್ಡಸಿದ್ದವ್ವನಹಳ್ಳಿಗೆ ಆಗಮಿಸಿದ ರಘು ಆಚಾರ್ ಕಾಂಗ್ರೆಸ್ ಕಾರ್ಯಕರ್ತ ಶಿವ ಎಂಬ ಯುವಕ ಮನೆಯಲ್ಲಿ ಮಲಗಿದ್ದು  ಸೋಮವಾರ ಬೆಳಗ್ಗೆ  ಗ್ರಾಮದಲ್ಲಿ ಸುತ್ತಾಡಿ ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿದ್ದಾರೆ. ಅಲ್ಲದೆ ತನಗೆ ರಾಜಕೀಯವಾಗಿ ಜನ್ಮ ನೀಡಿದ ಚಿತ್ರದುರ್ಗ ಜಿಲ್ಲೆಯ ಸೇವೆ ಮಾಡಬೇಕೆಂಬುದು ನನ್ನ ಆಶಯವಾಗಿದ್ದು, ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಚಿತ್ರದುರ್ಗ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದೇನೆ. ಕ್ಷೇತ್ರದ ಜನರು ಸಹಕಾರ ನೀಡಿ ಮತ ನೀಡಬೇಕು ಎಂದು ಗ್ರಾಮದ ಜನರಲ್ಲಿ ಮನವಿ‌ ಮಾಡಿದ್ದಾರೆ.
ವಿಧಾನ ಸಭಾ ಚುನಾವಣೆ ಇನ್ನೂ ಒಂದೂವರೆ ವರ್ಷ ಬಾಕಿ  ಇರುವಂತೆಯೇ ರಘು ಆಚಾರ್ ದೊಡ್ಡ ಸಿದ್ದವ್ವನಹಳ್ಳಿಯಲ್ಲಿ ಗ್ರಾಮ ವಾಸ್ತವ್ಯ ಮಾಡಿರುವುದು ಜಿಲ್ಲೆಯ ವಿವಿಧ ಪಕ್ಷದ ಮುಖಂಡರು ಹಾಗೂ ಜನರಲ್ಲಿ ಅಚ್ಚರಿ ಮೂಡಿಸಿದೆ.

[t4b-ticker]

You May Also Like

More From Author

+ There are no comments

Add yours