ನಾಯಕನಹಟ್ಟಿಯಲ್ಲಿ ಪದವಿ ವಿದ್ಯಾರ್ಥಿ ಗಳಿಗೆ ಕೊರೋನಾ ಲಸಿಕೆ*

 

 

ನಾಯಕನಹಟ್ಟಿ,
ಜು.10:
ಪಟ್ಟಣದ ಶ್ರೀ ಗುರು ತಿಪ್ಪೇರುದ್ರಸ್ವಾಮಿ ವಿದ್ಯಾಸಂಸ್ಥೆಯ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ ಪದವಿ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ವಿತರಣೆ ಮಾಡಲಾಯಿತು. ಈ ವೇಳೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ನಲಗೇತನಹಟ್ಟಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತಾಧಿಕಾರಿ ಡಾ ಮಹಮ್ಮದ್ ಮಾತನಾಡಿ ರಾಜ್ಯದಲ್ಲಿ ಕೊರೋನಾ ಮಹಾಮಾರಿ ಜನರನ್ನು ಬೆಂಬಿಡದೆ ಕಾಡುತ್ತಿರುವ ಹಿನ್ನೆಲೆಯಿಂದ ಈ ದಿನ ಪದವಿ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡಲಾಗುತ್ತದೆ. ವಿದ್ಯಾರ್ಥಿಗಳು ಕೊರೋನಾ ಲಸಿಕೆ ಕುರಿತು ಯಾರು ಸಹ ಭಯಪಡದೆ ಲಸಿಕೆ ಪಡೆದುಕೊಳ್ಳಿ ಎಂದು ಸಲಹೆ ನೀಡಿದರು.
ನಾಯಕನಹಟ್ಟಿ ಪೊಲೀಸ್ ಠಾಣೆಯ ಪಿಎಸ್ ಐ ಮಹೇಶ್ ಲಕ್ಷ್ಮಣ್ ಹೊಸಪೇಟೆ ಮಾತನಾಡಿ ,ಕೇಂದ್ರ ಮತ್ತು ರಾಜ್ಯ ಸರ್ಕಾರ ಉಚಿತವಾಗಿ ಪ್ರತಿಯೊಬ್ಬರಿಗೂ ಕೋವಿಡ್ ಲಸಿಕೆ ನೀಡುತ್ತಿದೆ. ಈ ನಿಟ್ಟಿನಲ್ಲಿ ಇಲ್ಲಿನ ಪದವಿ ವಿದ್ಯಾರ್ಥಿಗಳ ಕೂಡ ಕೋವಿಡ್ ಲಸಿಕೆ ನೀಡಲಾಗುತ್ತಿದೆ. ಇನ್ನು ಕೋವಿಡ್ ಲಸಿಕೆ ಪಡೆಯದ ವಿದ್ಯಾರ್ಥಿ ಗಳು ಲಸಿಕೆ ಪಡೆದುಕೊಂಡು ಲಸಿಕೆ ತಮ್ಮ ಕುಟುಂಬದವರಿಗೆ ಜಾಗೃತಿ ಮೂಡಿಸಿ ಲಸಿಕೆ ಕೊಡಿಸಬೇಕು ಎಂದು ಕಿವಿಮಾತು ಹೇಳಿದರು.
ಕೊರೋನಾದ ಸೋಂಕು ಗರ್ಭಿಣಿ ಮತ್ತು ಬಾಣತಿಯರಿಗೆ ಹೆಚ್ಚಾಗಿ ಕಂಡುಬರುತ್ತದೆ. ಆದ್ದರಿಂದ ತಮ್ಮ ಮನೆಯ ಸುತ್ತಮುತ್ತ ಸ್ವಚ್ಛತೆಯ ಬಗ್ಗೆ ಕಾಳಜಿವಹಿಸಬೇಕು ಎಂದ ಅವರು ವಿದ್ಯಾರ್ಥಿಗಳು ಯಾವುದೇ ಭಯಪಡದೆ ಕೊರೋನಾ ಲಸಿಕೆ ಪಡೆದುಕೊಳ್ಳಬೇಕು.

ಈ ಸಂದರ್ಭದಲ್ಲಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಎನ್ ವೈ.ಟಿ. ಸ್ವಾಮಿ, ಕಾಲೇಜಿನ ಪ್ರಾಂಶುಪಾಲರಾದ ಫಣೀಂದ್ರ, ಮತ್ತು ಶ್ರೀನಿವಾಸ್, ಆಸ್ಪತ್ರೆಯ ಸಿಬ್ಬಂದಿಗಳಾದ ಶೇಷಾದ್ರಿ ಆರೋಗ್ಯ ನಿರೀಕ್ಷಕರು, ಸುಕನ್ಯಾ, ಚೈತ್ರ ,ನಂದಿನಿ, ಮಂಜಮ್ಮ ,ಮತ್ತು ಆಶಾ ಕಾರ್ಯಕರ್ತರಾದ ಪಾರಿಜಾತ, ದ್ರಾಕ್ಷಾಯಿಣಿ ,ಅನುಸೂಯಮ್ಮ, ಮುತ್ತು ಉಪಸ್ಥಿತರಿದ್ದರು.

[t4b-ticker]

You May Also Like

More From Author

+ There are no comments

Add yours