ನಾಳೆ ಚಿತ್ರದುರ್ಗಕ್ಕೆ ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ಜಿಲ್ಲಾ ಪ್ರವಾಸ

 

ಜೂನ್28ರಂದು ಸಣ್ಣ ನೀರಾವರಿ ಸಚಿವರ ಜಿಲ್ಲಾ ಪ್ರವಾಸ
*****
ಚಿತ್ರದುರ್ಗ,ಜೂನ್27:
ರಾಜ್ಯ ಸಣ್ಣ ನೀರಾವರಿ ಸಚಿವರಾದ ಜೆ.ಸಿ.ಮಾಧುಸ್ವಾಮಿ ಅವರು ಜೂನ್ 28ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಸಚಿವರು ಅಂದು ಬೆಳಿಗ್ಗೆ 8.30ಕ್ಕೆ ಚಿಕ್ಕನಾಯಕನಹಳ್ಳಿಯಿಂದ ಹೊರಟು ಬೆಳಿಗ್ಗೆ 10ಕ್ಕೆ ಚಿತ್ರದುರ್ಗಕ್ಕೆ ಆಗಮಿಸುವರು. ಬೆಳಿಗ್ಗೆ 10.30ಕ್ಕೆ ಚಿತ್ರದುರ್ಗ ನಗರದ ಪಿಳ್ಳೆಕೇರನಹಳ್ಳಿಯ ಬಾಪೂಜಿ ವಿದ್ಯಾಸಂಸ್ಥೆ ಆವರಣದಲ್ಲಿ ಅನುದಾನ ರಹಿತ ಶಾಲಾ ಶಿಕ್ಷಕರುಗಳಿಗೆ ದಿನಸಿ ಕಿಟ್ ವಿತರಣೆ ಮಾಡುವರು. ಬೆಳಿಗ್ಗೆ 11.30ಕ್ಕೆ ನಗರದ ಶ್ರೀ ಜಗದ್ಗುರು ಮುರುಘಾರಾಜೇಂದ್ರ ಬೃಹನ್ಮಠದ ಅನುಭವ ಮಂಟಪದಲ್ಲಿ ಅಟಲ್ ಭೂಜಲ ಯೋಜನೆ ಬಗ್ಗೆ ಚಿತ್ರದುರ್ಗ ಜಿಲ್ಲೆಯ ಚಿತ್ರದುರ್ಗ, ಚಳ್ಳಕೆರೆ, ಹಿರಿಯೂರು, ಹೊಸದುರ್ಗ ಹಾಗೂ ಹೊಳಲ್ಕೆರೆ ತಾಲ್ಲೂಕುಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಮಧ್ಯಾಹ್ನ 3.30ಕ್ಕೆ ಚಿತ್ರದುರ್ಗದಿಂದ ಚಿಕ್ಕನಾಯಕನಹಳ್ಳಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours